ಶ್ರೀನಗರ: ಭಾರತೀಯ ಸೇನೆ ಅಲ್ ಬದರ್ ಉಗ್ರ ಸಂಘಟನೆ ಮುಖ್ಯಸ್ಥನನ್ನು ಹೊಡೆದುರುಳಿಸಿದೆ.
ಕಾಶ್ಮೀರದ ಸೋಪೆÇೀರ್ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೇನೆ ಮತ್ತು ಸೋಪೆÇರ್ ಪೆÇಲೀಸರು ಎನ್ ಕೌಂಟರ್ ನಡೆಸಿದ್ದು, ಗುಂಡಿನ ಚಕಮಕಿಯಲ್ಲಿ ಅಲ್ ಬದರ್ ಉಗ್ರ ಸಂಘಟನೆ ಮುಖ್ಯಸ್ಥ ಘನಿ ಖ್ವಾಜಾನನ್ನು ಹತ್ಯೆ ಮಾಡಲಾಗಿದೆ.
ಕಾಶ್ಮೀರ ಐಜಿಪಿ ವಿಜಯ್ ಕುಮಾರ್ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ.
ಉಗ್ರರ ಇರುವಿಕೆ ಕುರಿತು ಮಾಹಿತಿ ಪಡೆದ ಸೇನೆ, ಸ್ಥಳೀಯರ ಪೆÇಲೀಸರೊಂದಿಗೆ ಕಾರ್ಯಾಚರಣೆ ನಡೆಸಿತ್ತು. ಈ ವೇಳೆ ಉಗ್ರರು ತಪ್ಪಿಸಿಕೊಳ್ಳಲು ಭದ್ರತಾ ಸಿಬ್ಬಂದಿಗಳತ್ತ ಗುಂಡಿನ ದಾಳಿ ನಡೆಸಿದರು. ಆಗ ಭದ್ರತಾ ಪಡೆಗಳು ಪ್ರತಿದಾಳಿ ನಡೆಸಿತು.
ಈ ದಾಳಿಯಲ್ಲಿ ಓರ್ವ ಉಗ್ರ ಹತನಾಗಿದ್ದಾನೆ. ಮತ್ತೊಬ್ಬ ತಪ್ಪಿಸಿಕೊಂಡಿದ್ದು ಶೋಧ ಕಾರ್ಯ ನಡೆದಿದೆ ಎಂದವರು ತಿಳಿಸಿದ್ದಾರೆ.
ಮೃತ ಉಗ್ರನ ಗುರುತು ಪತ್ತೆಯಾಗಿದ್ದು, ಈತ ಸ್ಥಳೀಯ ಉಗ್ರ ಸಂಘಟನೆ ಅಲ್ ಬದರ್ ನ ಮುಖ್ಯಸ್ಥ ಘನಿ ಖ್ವಾಜಾ ಎಂದು ಎಂದು ಅವರು ಹೇಳಿದ್ದಾರೆ.
ಅಲ್ ಬದರ್ ಉಗ್ರ ಸಂಘಟನೆ ಮುಖ್ಯಸ್ಥನ ಹತ್ಯೆ

