ಬೆಂಗಳೂರು: ತಮ್ಮ ಪಾಡಿಗೆ ತಾವು ನಿಷ್ಠೆಯಿಂದ ಕೆಲಸ ಮಾಡಿಕೊಂಡು ಹೋಗುತ್ತಿರುವ ಡಾ.ಸಿ.ಎನ್.ಅಶ್ವತ್ಥನಾರಾಯಣರ ಪದವಿ ಮುಂದಿರುವ ‘ಉಪʼ ಹೋಗಿ ಆದಷ್ಟು ಬೇಗ ‘ಮುಖ್ಯಮಂತ್ರಿʼ ಎಂಬ ಪದನಾಮ ಬರುವಂತಾಗಲಿ. ಅದಕ್ಕೆ ಬೇಕಾದ ಕೃಪೆಯನ್ನು ಆ ಪರಮಶಿವ ನೀಡಲಿ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡರು ಹಾರೈಸಿದರು.
ಬೆಂಗಳೂರಿನ ಮಲ್ಲೇಶ್ವರದಲ್ಲಿ ಗುರುವಾರ ರಾತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಫೌಂಡೇಷನ್ ಆಯೋಜಿಸಿದ್ದ ಮಹಾ ಶಿವರಾತ್ರಿ ಉತ್ಸವಕ್ಕೆ ಡಿವಿಎಸ್ ಚಾಲನೆ ನೀಡಿ ಮಾತನಾಡಿದರು.
ನಮ್ಮ ನಡುವಿನ ರಾಜಕಾರಣಿಗಳಲ್ಲಿ ಮಾತನಾಡುವವರೇ ಜಾಸ್ತಿ. ಇದಕ್ಕೆ ಅಶ್ವತ್ಥನಾರಾಯಣ ಅಪವಾದ. ಅವರದ್ದು ಮಾತು ಕನಿಷ್ಠ, ಕೆಲಸ ಗರಿಷ್ಠ ಎನ್ನುವ ನೀತಿ. ಈ ಪರಿಶ್ರಮವೇ ಅವರನ್ನು ಮುಂದೊಂದು ದಿನ ಉನ್ನತ ಸ್ಥಾನಕ್ಕೆ ಕೊಂಡೊಯ್ಯಲಿದೆ ಎಂದು ಗೌಡರು ಹೇಳಿದರು.
ಮಲ್ಲೇಶ್ವರ ಕ್ಷೇತ್ರದಲ್ಲಿ ಅದೆಷ್ಟೋ ಮಹಾನುಭಾವರು ಇದ್ದಾರೆ. ಕವಿಗಳು, ವಿಜ್ಞಾನಿಗಳು, ಪಂಡಿತರು, ಪದ್ಮಗಳು- ಭಾರತ ರತ್ನಗಳು ಇದ್ದಾರೆ. ಮುಂದಿನ ದಿನಗಳಲ್ಲಿ ಇದೇ ಕ್ಷೇತ್ರದಿಂದ ಒಬ್ಬ ಮುಖ್ಯಮಂತ್ರಿಯೂ ಹೊರಹೊಮ್ಮಲಿ ಎಂದು ಸದಾನಂದ ಗೌಡರು ಹೇಳಿದರು.
ಅಬ್ಬರ ಇಲ್ಲ, ಆಡಂಬರ ಇಲ್ಲದ ವ್ಯಕ್ತಿ ಅಶ್ವತ್ಥನಾರಾಯಣ. ಅವರು ಮಾಡುತ್ತಿರುವ ಉತ್ತಮ ಕೆಲಸಗಳೇ ಅವರ ಬಗ್ಗೆ ಮಾತನಾಡುತ್ತಿವೆ. ಮುಂದಿನ ದಿನಗಳಲ್ಲಿ ಅವರು ಇನ್ನಷ್ಟು ಬಿಡುವಿಲ್ಲದ ಕೆಲಸಗಳಲ್ಲಿ ತೊಡಗಿಬಿಡುತ್ತಾರೆಂದು ಸದಾನಂದಗೌಡರು ಮಾರ್ಮಿಕವಾಗಿ ನುಡಿದರು.
ಮಲ್ಲೇಶ್ವರದಲ್ಲಿ ಮಹಾ ಶಿವರಾತ್ರಿ ಪ್ರಯುಕ್ತ ನೃತ್ಯ, ಹಾಸ್ಯ, ಸಂಗೀತ ಮೇಳೈಸಿದ ಸಾಂಸ್ಕøತಿಕ ಜಾಗರಣೆ ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಅತಿಥಿಗಳನ್ನು ಸ್ವಾಗತಿಸಿದರು.
ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ವೆಂಕಟೇಶ್, ನಿವೃತ್ತ ಪೆÇೀಲೀಸ್ ಅಧಿಕಾರಿ ಬಿ.ಕೆ.ಶಿವರಾಮ್ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.
ಡಾ. ಅಶ್ವತ್ಥನಾರಾಯಣರ ಮುಂದಿರುವ ಉಪ ಮುಖ್ಯಮಂತ್ರಿಯಲ್ಲಿ ‘ಉಪʼ ಹೋಗಿ ‘ಮುಖ್ಯಮಂತ್ರಿʼಯಷ್ಟೇ ಉಳಿಯಲಿ ಎಂದು ಹಾರೈಸಿದ ಡಿವಿಎಸ್

