ಸಿಡಿ ಪ್ರಕರಣ: ಸಂತ್ರಸ್ತ ಯುವತಿಗೆ ಪೆÇಲೀಸರಿಂದ ನೋಟಿಸ್

ಬೆಂಗಳೂರು: ಸಂತ್ರಸ್ತ ಯುವತಿಗೆ ವಿಚಾರಣೆಗೆ ಹಾಜರಾಗುವಂತೆ ನಗರದ ಕಬ್ಬನ್ ಪಾರ್ಕ್ ಠಾಣೆ ಪೆÇಲೀಸರು ನೋಟಿಸ್ ಜಾರಿ ಮಾಡಿದ್ದಾರೆ.
ಕಬ್ಬನ್ ಪಾರ್ಕ್ ಠಾಣೆ ಪೆÇಲೀಸರು ಯುವತಿ ವಾಸವಾಗಿದ್ದ ಮನೆ ಹಾಗೂ ಆಕೆಯ ಸ್ನೇಹಿತರಿಗೂ ಪೆÇಲೀಸರು ನೋಟಿಸ್ ನೀಡಿದ್ದಾರೆ.
ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ವಿಡಿಯೋ ಬಿಡುಗಡೆ ಮಾಡಿದ್ದ ಯುವತಿ ತನಗೆ ಹಾಗೂ ತನ್ನ ಕುಟುಂಬಕ್ಕೆ ಜೀವ ಬೆದರಿಕೆಯಿದೆ. ರಕ್ಷಣೆ ನೀಡುವಂತೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರಿಗೆ ಮನವಿ ಮಾಡಿದ್ದರು.