ರಮೇಶ್ ಜಾರಕಿಹೊಳಿ ಸಿಡಿ ಕೇಸ್ ಡಿಕೆಶಿ ಮಾಡಿದ್ದಾರೆ ಅಂತ ಯಾರಾದರು ಹೇಳಿದ್ದಾರ? -ಹೆಚ್‍ಡಿಕೆ

ಮೈಸೂರು: ರಮೇಶ್ ಜಾರಕಿಹೊಳಿ ಸಿಡಿ ಕೇಸ್ ಡಿಕೆ ಶಿವಕುಮಾರ್ ಮಾಡಿದ್ದಾರೆ ಅಂತ ಯಾರಾದರು ಹೇಳಿದ್ದಾರಾ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದರು.
ನಗರದಲ್ಲಿ ಭಾನುವಾರ ಹೆಚ್‍ಡಿಕೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಡಿಕೆ ಶಿವಕುಮಾರ್ ಅವರ ಹೆಸರು ಯಾರು ಹೇಳಿದ್ದಾರೆ. ಅವರ ಹೆಸರನ್ನು ಅವರೇ ಏಕೆ ಮುಂದೆ ಬಿಟ್ಟುಕೊಂಡಿದ್ದಾರೆಂದರು ಕುಮಾರಸ್ವಾಮಿ.
ಅವರೇ ಮಾಡಿದ್ದಾರೆ ಅಂತ ಯಾರಾದರು ಹೇಳಿದ್ದಾರ? ರಾಜ್ಯದಲ್ಲಿ ಎಷ್ಟು ಜನ ಮಹಾನ್ ನಾಯಕರು ಇದ್ದಾರೆ ಎಂದು ಕುಮಾರಸ್ವಾಮಿ ಹೇಳಿದರು.
ಸಂತ್ರಸ್ತ ಮಹಿಳೆಗೆ ಯಾರಿಂದ ರಕ್ಷಣೆ ಸಿಗಬೇಕಿತ್ತೋ ಅದು ಸಿಕ್ಕಿದೆ ಎಂದು ಮಾರ್ಮಿಕವಾಗಿ ನುಡಿದ ಕುಮಾರಸ್ವಾಮಿ ಅವರು,
ರಕ್ಷಣೆಯನ್ನು ಸರ್ಕಾರದಲ್ಲಿರುವವರು ಕೊಟ್ಟಿದ್ದಾರೋ, ವಿರುದ್ಧ ಇರೋರು ಕೊಟ್ಟಿದ್ದಾರೊ ಗೊತ್ತಿಲ್ಲ ಎಂದರು.
ಸರ್ಕಾರ ರಚನೆಗೆ ಈತನ ಸಹಾಯ ಪಡೆದವರು ಈತನ ಸ್ಪೀಡ್ ಕಟ್ ಮಾಡೋಕೆ ಮಾಡಿದ್ದಾರೋ ನನಗೆ ಗೊತ್ತಿಲ್ಲ ಎಂದು ಅವರು ಹೇಳಿದರು.
ಆಕೆ ಸರ್ಕಾರಕ್ಕೆ ವೀಡಿಯೋ ಕಳುಹಿಸಿದ್ದಾಳೆ. ಬೇರೆ ಯಾರಾದರು ರೆಕಾರ್ಡ್ ಮಾಡಿ ಕಳುಹಿಸಿದ್ದಾರೋ ತನಿಖೆಯಿಂದ ಹೊರ ಬರಬೇಕು ಎಂದರು.
ಪೊಲೀಸ್ ಅಧಿಕಾರಿಗಳು ಯಾವುದೇ ಪ್ರಭಾವಕ್ಕೆ ಒಳಗಾಗಬಾರದು. ರಾಜ್ಯದ ಗೌರವ ಉಳಿಸಲು ನಿಷ್ಪಕ್ಷಪಾತ ತನಿಕೆ ಮಾಡಬೇಕು ಎಂದು ಹೆಚ್‍ಡಿಕೆ ಹೇಳಿದರು.