ಗೀತಾ ಶಿವರಾಜ್ ಕುಮಾರ್ ಅವರು ಪಕ್ಷ ಸೇರುವ ಬಗ್ಗೆ ಕಾದು ನೋಡಿ -ಡಿ.ಕೆ. ಶಿ.

ಬೆಂಗಳೂರು: ಗೀತಾ ಶಿವರಾಜ್ ಕುಮಾರ್ ಅವರು ಕಾಂಗ್ರೆಸ್ ಸೇರುವ ಬಗ್ಗೆ ಕಾದು ನೋಡಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಹೇಳಿದರು.

ನಗರದಲ್ಲಿ ಸೋಮವಾರ ನಟ ಶಿವರಾಜ್ ಕುಮಾರ್ ಅವರ ಜತೆ ಸಮಾಲೋಚನೆ ನಡೆಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೂಂದಿಗೆ ಮಾತನಾಡಿದರು.
ಶಿವರಾಜ್ ಕುಮಾರ್ ಅವರು ನಮ್ಮ ಆತ್ಮೀಯರು. ಅವರ ಕುಟುಂಬ ಇಡೀ ದೇಶ ಹಾಗೂ ರಾಜ್ಯದ ಆಸ್ತಿ. ಆ ಕುಟುಂಬದ ಮೇಲೆ ನಮಗೆ ಅಪಾರ ಗೌರವವಿದೆ. ನಮಗೂ ಅವರ ಜತೆ ವೈಯಕ್ತಿಕ ಸಂಬಂಧಗಳಿವೆ. ನಾನು ಆ ಬಗ್ಗೆ ಹೆಚ್ಚು ಹೇಳುವುದಿಲ್ಲ. ಮಧು ಬಂಗಾರಪ್ಪ ಅವರಿಗೆ ಆ ಬಗ್ಗೆ ಮಾತನಾಡುವ ಹಕ್ಕಿದೆ. ಅವರು ಮಾತನಾಡಿದ್ದಾರೆ. ಸಂದರ್ಭ ಬಂದಾಗ ಗೀತಾ ಶಿವರಾಜ್ ಕುಮಾರ್ ಅವರೇ ಮಾತನಾಡುತ್ತಾರೆ ಎಂದರು.