ಕರ್ನಾಟಕದ 1 ಲೋಕಸಭೆ 2 ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆ ದಿನಾಂಕ ಪ್ರಕಟ

ಬೆಂಗಳೂರು: ರಾಜ್ಯದ ಒಂದು ಲೋಕಸಭೆ ಹಾಗೂ ಎರಡು ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆಗೆ ದಿನಾಂಕವನ್ನು ಚುನಾವಣಾ ಆಯೋಗ ಪ್ರಕಟಿಸಿದೆ.
ಬೆಳಗಾವಿ ಲೋಕಸಭೆ, ಮಸ್ಕಿ ಮತ್ತು ಬಸವಕಲ್ಯಾಣ ವಿಧಾನಸಭೆಗೆ ಏ. 17ರಂದು ಚುನಾವಣೆ ನಡೆಯಲಿದೆ.
ಬಿಜೆಪಿ ಸಂಸದ ಸುರೇಶ್ ಅಂಗಡಿ ಅವರ ನಿಧನದ ಹಿನ್ನೆಲೆಯಲ್ಲಿ ಬೆಳಗಾವಿ ಲೋಕಸಭೆ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ಇನ್ನು ರಾಯಚೂರು ಜಿಲ್ಲೆಯ ಮಸ್ಕಿ ವಿಧಾನಕ್ಷೇತ್ರದ ಶಾಸಕರಾಗಿದ್ದ ಪ್ರತಾಪ್ ಗೌಡ ಪಾಟೀಲ್ ರಾಜಿನಾಮೆಯಿಂದ ತೆರವಾಗಿದ್ದ ಕ್ಷೇತ್ರ. ಬೀದರ್ ಜಿಲ್ಲೆಯ ಬಸವಕಲ್ಯಾಣ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ. ನಾರಾಯಣರಾವ್ ನಿಧನದಿಂದಾಗಿ ಉಪಚುನಾವಣೆ ನಡೆಯುತ್ತಿದೆ. ಆದರೆ ಜೆಡಿಎಸ್ ಶಾಸಕ ಎಂಸಿ ಮನಗೂಳಿ ನಿಧನದಿಂದ ತೆರವಾಗಿದ್ದ ಸಿಂದಗಿ ವಿಧಾನಸಭೆ ಕ್ಷೇತ್ರದ ಉಪಚುನಾವಣೆಗೆ ದಿನಾಂಕ ಘೋಷಣೆಯಾಗಿಲ್ಲ.