ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ.
ಸಿಡಿಯಲ್ಲಿ ಸಂತ್ರಸ್ತ ಯುವತಿಯೊಂದಿಗೆ ಸಂಭಾಷಣೆ ನಡೆಸಿರುವ ರಮೇಶ್ ಜಾರಕಿಹೊಳಿ ಕನ್ನಡಿಗರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಈ ಮೂಲಕ ಕನ್ನಡಿಗರಿಗೆ ಅಪಮಾನ ಮಾಡಿದ್ದಾರೆ ಎಂದು ಕನ್ನಡಿಗರ ರಕ್ಷಣಾ ವೇದಿಕೆ ಕಬ್ಬನ್ ಪಾರ್ಕ್ ಪೆÇಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ.
ಕರ್ನಾಟಕದಲ್ಲಿ ಹುಟ್ಟಿ, ಬೆಳೆದು ಕನ್ನಡಿಗರ ಬಗ್ಗೆ ರೀತಿ ಹೇಳುವುದು ಅವರಿಗೆ ಶೋಭೆಯಲ್ಲ. ಕೂಡಲೇ ಅವರನ್ನ ರಾಜ್ಯ ಸರ್ಕಾರ ಶಾಸಕ ಸ್ಥಾನದಿಂದ ವಜಾ ಮಾಡಬೇಕು. ಅವರ ವಿರುದ್ಧ ಕಠಿಣವಾದ ಕ್ರಮ ಕೈಗೊಳ್ಳಬೇಕು ಎಂದು ದೂರು ನೀಡಲಾಗಿದೆ.
ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಮತ್ತೊಂದು ದೂರು

