ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ -ಸಚಿವ ಡಾ.ಕೆ.ಸುಧಾಕರ್

ಬೆಂಗಳೂರು, ಮಾ. 24- ರಾಜ್ಯದಲ್ಲಿ ಕೋವಿಡ್ ಸೋಂಕಿನ ಪ್ರಮಾಣ ಮುಂದಿನ ಒಂದು ತಿಂಗಳು ಹೆಚ್ಚಾಗುವ ಸಾಧ್ಯತೆ ಇದ್ದು, ಜಿಲ್ಲಾಡಳಿತ ಸಭೆ-ಸಮಾರಂಭ, ಮನರಂಜನೆ, ಧಾರ್ಮಿಕ ಕಾರ್ಯಕ್ರಮಗಳಿಗೆ ಕಡಿವಾಣ ಹಾಕಬೇಕೆಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ಸೂಚಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ಒಂದು ತಿಂಗಳು ಅತ್ಯಂತ ಸವಾಲಿನ ಪರಿಸ್ಥಿತಿ ಎದುರಾಗುವ ಸಂಭವವಿದೆ. ಪಾಸಿಟಿವ್ ಪ್ರಕರಣಗಳ ಸಂಖ್ಯೆ ಶೇ. 2ರಷ್ಟು ಹೆಚ್ಚಾಗುತ್ತಿದ್ದು, ಜಿಲ್ಲಾಡಳಿತ ಮನರಂಜನೆ, ಧಾರ್ಮಿಕ ಕಾರ್ಯಕ್ರಮಗಳು, ರಾಜಕೀಯ ಚಟುವಟಿಕೆಗಳು, ಸಭೆ-ಸಮಾರಂಭಗಳಿಗೆ ಅವಕಾಶ ನೀಡದಂತೆ ಕ್ರಮ ಕೈಗೊಳ್ಳಬೇಕೆಂದು ನಿರ್ದೇಶನ ನೀಡಿದರು.
ಈಗಾಗಲೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಜಿಲ್ಲಾಧಿಕಾರಿಗಳ ಜತೆಯೂ ಮಾತುಕತೆ ನಡೆಸಲಾಗಿದೆ. ಗಡಿ ಭಾಗಗಳಲ್ಲಿ ಹೊರರಾಜ್ಯಗಳಿಂದ ಬಂದವರನ್ನು ತಪಾಸಣೆ ಮಾಡುವುದು, ಕೋವಿಡ್ ನೆಗೆಟಿವ್ ಪ್ರಮಾಣ ಪತ್ರ ಸೇರಿದಂತೆ ಹತ್ತು-ಹಲವು ಕ್ರಮಗಳನ್ನು ಕೈಗೊಂಡಿದ್ದೇವೆ ಎಂದು ತಿಳಿಸಿದರು.
ಸ್ಟಾರ್ ನಟರ ಫಿಲಂ ಪ್ರಮೋಷನ್ ನಿಂದ ಸಾವಿರಾರು ಜನರು ಸೇರುತ್ತಿದ್ದು ದಯವಿಟ್ಟು ನೀವು ಮಾಸ್ಕ್ ಹಾಕಿ, ನಿಮ್ಮ ಫ್ಯಾನ್ಸ್ ಗಳಿಗೂ ಜಾಗೃತಿ ಮೂಡಿಸಿ ಎಚ್ಚರಿಕೆ ನೀಡಿ ಎಂದು ಸ್ಟಾರ್ ನಟರಲ್ಲಿ ಸಚಿವ ಡಾ.ಕೆ.ಸುಧಾಕರ್ ಮನವಿ ಮಾಡಿದ್ದಾರೆ.
ರಾಜ್ಯದಲ್ಲಿ ಕೊರೊನಾ ಕಂಟ್ರೋಲ್ ತಪ್ಪುವ ಸಾಧ್ಯತೆ ಇದೆ. ಹಲವೆಡೆ ನಟರು ಫಿಲಂ ಪ್ರಚಾರ ಮಾಡುತ್ತಿದ್ದಾರೆ. ಫಿಲಂ ಪ್ರಮೋಷನ್ ಗೆ ಸಾವಿರಾರು ಜನ ಸೇರುತ್ತಿದ್ದಾರೆ. ನಟರಿಗೂ ಸಾಮಾಜಿಕ ಜವಾಬ್ದಾರಿ ಇದೆ. ಹೀಗಾಗಿ ನೀವು ಮಾಸ್ಕ್ ಹಾಕಿ, ನಿಮ್ಮ ಫ್ಯಾನ್ಸ್ ಗಳಿಗೂ ಜಾಗೃತಿ ಮೂಡಿಸಿ ಎಂದು ಮನವಿ ಮಾಡಿದರು.
ಮಠಾಧೀಶರು ಜಾತ್ರೆ, ಉತ್ಸವ, ಸಮಾರಂಭಗಳಿಗೆ ಕಡಿವಾಣ ಹಾಕಿ. ಇಲ್ಲದಿದ್ದರೇ ರಾಜ್ಯದಲ್ಲಿ ಕೊರೊನಾ ನಿಯಂತ್ರಣ ತಪೆÇ್ಪೀದು ಗ್ಯಾರಂಟಿ ಎಂದು ಸಚಿವ ಡಾ. ಸುಧಾಕರ್ ಎಚ್ಚರಿಕೆ ನೀಡಿದರು.