ಬೆಂಗಳೂರ: ಮಾಜಿ ಸಚಿವ ರಮೇಶ್ ಜಾರಕಿ ಹೊಳಿ ವಿರುದ್ಧ ಎಫ್‍ಐಆರ್ ದಾಖಲಾಗಿದೆ.
ಸಿಡಿಯಲ್ಲಿ ಕಾಣಿಸಿಕೊಂಡಿದ್ದ ಯುವತಿ ಪರ ವಕೀಲ ಜಗದೀಶ್ ದೂರು ನೀಡಿದ್ದರಿಂದ ನಗರದ ಕಬ್ಬನ್ ಪಾರ್ಕ್ ಪೆÇಲೀಸ್ ಠಾಣೆಯಲ್ಲಿ ರಮೇಶ್ ಜಾರಕಿಹೊಳಿ ವಿರುದ್ಧ ಎಫ್‍ಐಆರ್ ದಾಖಲಾಗಿದೆ.
ರಮೇಶ್ ಜಾರಕಿ ಹೊಳಿ ವಿರುದ್ಧ ಐಪಿಸಿ ಸೆಕ್ಷನ್ 376 ಸಿ (ಅತ್ಯಾಚಾರ), 354 ಎ(ಕೆಲಸ ನೀಡುವುದಾಗಿ ನಂಬಿಸಿ ದೈಹಿಕ ಸಂಪರ್ಕ) 506 (ಜೀವ ಬೆದರಿಕೆ) 417(ವಂಚನೆ), ವಿಡಿಯೋ ಹೊರ ಹಾಕಿದ್ದಕ್ಕೆ ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 67ರ ಅಡಿ ಪ್ರಕರಣವನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ.
ರಮೇಶ್ ಜಾರಕಿಹೊಳಿ, ಸರ್ಕಾರಿ ಕೆಲಸ ಕೊಡಿಸುವುದಾಗಿ ಲೈಂಗಿಕ ಸಂಪರ್ಕ ನಡೆಸಿರುವುದು, ವಿಡಿಯೋ ಕರೆ ಮಾಡಿ ಅಶ್ಲೀಲ ಮಾತುಗಳನ್ನಾಡಿ ನಗ್ನವಾಗಿ ಮಾತನಾಡಲು ಪುಸಲಾಯಿಸಿದ್ದಾರೆ. ಕೆಲಸ ಕೊಡಿಸದೆ ವಂಚಿಸಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ಸಿಡಿ ಯುವತಿ ದೂರಿನಲ್ಲಿ ಆರೋಪಿಸಿದ್ದಾರೆ.
ರಮೇಶ್ ಜಾರಕಿಹೊಳಿ ವಿರುದ್ಧ ಎಫ್‍ಐಆರ್

