ಬೆಂಗಳೂರು: ರಾಜ್ಯದಲ್ಲಿ ಭಾನುವಾರ 3,082 ಕೊರೊನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ.
ಇದರೊಂದಿಗೆ ಸೋಂಕಿತರ ಸಂಖ್ಯೆ 9,87,012ಕ್ಕೆ ಏರಿಕೆಯಾಗಿದೆ.
24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೊನಾದಿಂದ 12 ಮಂದಿ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಬೆಂಗಳೂರಿನಲ್ಲಿ ಭಾನುವಾರ 2,004 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 4,28,173ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಕೊರೊನಾಗೆ 7 ಮಂದಿ ಬಲಿಯಾಗಿದ್ದಾರೆ.
ರಾಜ್ಯದಲ್ಲಿ ಭಾನುವಾರ 1,285 ಸೋಂಕಿತರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 9,51,452ಕ್ಕೆ ಏರಿಕೆಯಾಗಿದೆ. ಇನ್ನು 23,037 ಸಕ್ರೀಯ ಪ್ರಕರಣಗಳಿದ್ದು, ಈ ಪೈಕಿ 204 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

