ರಾಜ್ಯದಲ್ಲಿ ಯಾವುದೇ ರೀತಿಯ ಲಾಕ್ ಡೌನ್ ಇಲ್ಲ -ಸಿಎಂ ಯಡಿಯೂರಪ್ಪ

ಬೆಂಗಳೂರು: ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಭಾರೀ ಬೆಂಗಳೂರು: ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಭಾರೀ ಪ್ರಮಾಣದಲ್ಲಿ ಏರಿಕೆಯಾಗುತ್ತಿದ್ದರೂ ರಾಜ್ಯದಲ್ಲಿ ಯಾವುದೇ ರೀತಿಯ ಲಾಕ್ ಡೌನ್ ಇಲ್ಲ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಸೋಮವಾರ ತಿಳಿಸಿದರು.
ಕೊರೊನಾ ರೂಪಾಂತರಿ ಹೆಚ್ಚಳ ಹಿನ್ನಲೆಯಲ್ಲಿ ಸಿಎಂ ಯಡಿಯೂರಪ್ಪ ಅವರು ಸೋಮವಾರ ಸಂಜೆ ಗೃಹ ಕಚೇರಿ ಕೃಷ್ಣಾದಲ್ಲಿ ಮಹತ್ವದ ಸಭೆ ನಡೆಸಿ, ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ರಾಜ್ಯದಲ್ಲಿ ಯಾವುದೇ ಲಾಕ್ ಡೌನ್ ಇಲ್ಲ. ನೈಟ್ ಕಫ್ರ್ಯೂ ಸಹ ಜಾರಿಗೊಳಿಸುವುದಿಲ್ಲ. ಆದರೆ ಮಾ. 30ರಿಂದ 15 ದಿನಗಳ ಕಾಲ ಧಾರ್ಮಿಕ ಕಾರ್ಯಕ್ರಮ, ಜಾತ್ರೆ, ಪ್ರತಿಭಟನೆ, ಸತ್ಯಾಗ್ರಹಗಳಿಗೆ ಅವಕಾಶ ಇರುವುದಿಲ್ಲ ಎಂದು ಸಿಎಂ ತಿಳಿಸಿದರು.
ಲಾಕ್ ಡೌನ್ ಬದಲಿಗೆ ರಾಜ್ಯದಲ್ಲಿ ಕೋವಿಡ್ ನಿಬರ್ಂಧಿಸಲು ಕಠಿಣ ನಿಯಮಗಳು ಜಾರಿಗೆ ತರಲಾಗುತ್ತಿದೆ ಎಂದು ಬಿಎಸ್ ವೈ ಹೇಳಿದರು.
ಅಪಾರ್ಟ್ ಮೆಂಟ್ ಗಳಲ್ಲಿ ಪಾರ್ಟಿ, ಜಿಮ್ ಮತ್ತು ಈಜುಕೊಳಗಳನ್ನು ನಿಷೇಧಿಲಾಗಿದೆ ಎಂದು ಮುಖ್ಯಮಂತ್ರಿಗಳು ಹೇಳಿದರು.
ಮದುವೆ ಹಾಗೂ ಇತರೆ ಸಮಾರಂಭಗಳಲ್ಲಿ ಹೆಚ್ಚು ಜನ ಸೇರುವಂತಿಲ್ಲ. ಸಾಮಾಜಿಕ ಅಂತರ ಮತ್ತು ಮಾಸ್ಕ್ ಧರಿಸುವುದು ಕಡ್ಡಾಯ ಎಂದಿದ್ದಾರೆ.
ಜನರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಮಾಸ್ಕ್ ಧರಿಸದಿದ್ದರೆ ದಂಡ ವಿಧಿಸಲಾಗುವುದು ಎಂದು ಸಿಎಂ ತಿಳಿಸಿದರು.