ಬೆಂಗಳೂರು: ಸಿಡಿ ಸಂತ್ರಸ್ತ ಯುವತಿಯ ಹೇಳಿಕೆ ದಾಖಲಿಸಲು ನ್ಯಾಯಾಲಯ ಸಮ್ಮತಿಸಿದೆ.
ನಗರದ 24ನೇ ಎಸಿಎಂಎಂ ಕೋರ್ಟ್ ಯುವತಿ ಹೇಳಿಕೆ ದಾಖಲಿಸಲು ಅನುಮತಿ ನೀಡಿದೆ.
ಸಿಡಿ ಲೇಡಿ ಪರ ವಕೀಲ ಜಗದೀಶ್ 24 ನೇ ಎಸಿಎಂಎಂ ಕೋರ್ಟ್ ಗೆ ಹಾಜರಾಗಿದ್ದು, ಈ ವಿಚಾರಣೆ ನಡೆಸಿದ ಕೋರ್ಟ್ ಯುವತಿಯ ಹೇಳಿಕೆ ಪಡೆಯಲು ಕೋರ್ಟ್ ಅನುಮತಿ ನೀಡಿದೆ ಎನ್ನಲಾಗಿದೆ.
ಮೊದಲು ಸಿಆರ್ ಪಿಸಿ 164ರ ಅಡಿ ಯುವತಿ ಹೇಳಿಕೆ ದಾಖಲಿಸಿಕೊಳ್ಳುತ್ತೇವೆ. ನಂತರ ತನಿಖಾಧಿಕಾರಿ ಮುಂದೆ ಹೇಳಿಕೆ ನೀಡಲಿ ಎಂದು ಕೋರ್ಟ್ ಸೂಚಿಸಿದೆ.
ಯುವತಿ ಹೇಳಿಕೆ ದಾಖಲಿಸಲು ಕೋರ್ಟ್ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಸಂತ್ರಸ್ತ ಯುವತಿ ನ್ಯಾಯಾಲಯಕ್ಕೆ ಹಾಜರಾಗುವ ಸಾಧ್ಯತೆ ಇದೆ.
ಸಿಡಿ ಕೇಸ್: ಸಂತ್ರಸ್ತ ಯುವತಿ ಹೇಳಿಕೆ ದಾಖಲಿಸಲು ಕೋರ್ಟ್ ಒಪ್ಪಿಗೆ

