ಸಿಡಿ ಪ್ರಕರಣ: ಸಂತ್ರಸ್ತ ಯುವತಿ ಹೇಳಿಕೆ ದಾಖಲು; ನಾಳೆ ಮತ್ತೆ ವಿಚಾರಣೆ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಪ್ರಕರಣ ಸಂಬಂಧ ಸಂತ್ರಸ್ತ ಯುವತಿ ಮಂಗಳವಾರ ಮ್ಯಾಜಿಸ್ಟ್ರೇಟ್ ಬಳಿ ತನ್ನ ಹೇಳಿಕೆ ದಾಖಲಿಸಿದ್ದಾರೆ.
ನಗರದ ವಸಂತನಗರದ ಗುರುನಾನಕ್ ಭವನದಲ್ಲಿ ಯುವತಿ ನೀಡಿರುವ ಹೇಳಿಕೆಯನ್ನು ದಾಖಲಿಸಲಾಯಿತು.
ಮ್ಯಾಜಿಸ್ಟ್ರೇಟ್ ಎದರು ಹೇಳಿಕೆ ದಾಖಲು ಪ್ರಕ್ರಿಯೆ ನಂತರ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ ಐಟಿ ಅಧಿಕಾರಿಗಳು ಯುವತಿಯನ್ನು ಹೆಚ್ಚಿನ ವಿಚಾರಣೆಗಾಗಿ ಆಡುಗೋಡಿಯ ಟೆಕ್ನಿಕಲ್ ವಿಂಗ್ ಗೆ ಕರೆದುಕೊಂಡು ಹೋಗಿ ಹೇಳಿಕೆಯನ್ನು ಪಡೆದುಕೊಂಡಿದ್ದಾರೆ.
ಮಾ. 31ರಂದು ಮತ್ತೆ ವಿಚಾರಣೆಗೆ ಹಾಜರಾಗುವಂತೆ ಯವತಿಗೆ ಎಸ್ ಐಟಿ ಪೊಲೀಸರು ನೋಟೀಸ್ ನೀಡಿದ್ದಾರೆ.