ಬೆಂಗಳೂರು: ಜೆಡಿಎಸ್ ವರಿಷ್ಠ ಹೆಚ್. ಡಿ. ದೇವೇಗೌಡರು ಹಾಗೂ ಅವರ ಪತ್ನಿ ಚೆನ್ನಮ್ಮ ಇಬ್ಬರಲ್ಲಿಯೂ ಕೊರೊನಾ ಸೋಂಕು ಪತ್ತೆ ಆಗಿದೆ.
ಇಬ್ಬರೂ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಆರೋಗ್ಯ ಸಚಿವ ಡಾ. ಸುಧಾಕರ್, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹಾಗೂ ಅವರ ಧರ್ಮಪತ್ನಿ ಅವರಿಗೆ ಕೊರೊನಾ ಸೋಂಕು ಧೃಢಪಟ್ಟಿರುವ ಸುದ್ದಿ ತಿಳಿಯಿತು ಎಂದಿದ್ದಾರೆ.
ಅವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಡಾ. ಸುಧಾಕರ್ ತಿಳಿಸಿದ್ದಾರೆ.
ಮಾಜಿ ಪ್ರಧಾನಿ ಹೆಚ್.ಡಿ.ಡಿ ಹಾಗೂ ಪತ್ನಿ ಚೆನ್ನಮ್ಮರಿಗೂ ಕೊರೊನಾ

