ಬಸವರಾಜ ಬೊಮ್ಮಾಯಿ ಬೆಂಗಳೂರು: ರಮೇಶ್ ಜಾರಕಿಹೊಳಿ ಅವರನ್ನ ಬಂಧನ ಮಾಡಿ ಅಂತ ಕೇಳುವ ನೈತಿಕತೆ ಕಾಂಗ್ರೆಸ್‍ಗೆ ಇಲ್ಲ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.
ಮಾಧ್ಯಮ ಪ್ರತಿನಿಧಿಗಳೊಂದಿಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಬುಧವಾರ ಮಾತನಾಡಿದರು.
ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರನ್ನ ಯಾಕೆ ಬಂಧಿಸಿಲ್ಲ ಎಂದು ಕಾಂಗ್ರೆಸ್ ಮಾಡಿರುವ ಟ್ವೀಟ್ ಬಗ್ಗೆ ಪ್ರತಿಕ್ರಿಯಿಸಿದ ಗೃಹ ಸಚಿವರು, ಮೇಟಿ ಕೇಸ್‍ನಲ್ಲಿ ಕಾಂಗ್ರೆಸ್‍ನವರು ಏನು ಮಾಡಿದರು ಎಂಬುದು ಗೊತ್ತಿದೆ ಎಂದರು.
ಮೇಟಿ ಕೇಸ್‍ನಲ್ಲಿ ಕಾಂಗ್ರೆಸ್ ಸರ್ಕಾರ ಎಫ್‍ಐಆರ್ ಕೂಡ ಹಾಕಿರಲಿಲ್ಲ. ವಿಚಾರಣೆ ಕೂಡ ಮಾಡಲಿಲ್ಲ. ಸಿಐಡಿಗೆ ಕೊಟ್ಟು ಏನೂ ಮಾಡದೇ ಕ್ಲೀನ್ ಚಿಟ್ ಕೊಡುವ ಕೆಲಸ ಮಾಡಲಾಯಿತು ಎಂದು ಬೊಮ್ಮಾಯಿ ಹೇಳಿದರು.
ಸಿಡಿ ಮಾಡಿದವರು ಯಾರು ಎಂದು ಕಂಡು ಹಿಡಿಯುವ ಕೆಲಸವನ್ನೂ ಕಾಂಗ್ರೆಸ್ ಮಾಡಲಿಲ್ಲ ಎಂದು ಗೃಹ ಸಚಿವರು ಹೇಳಿದರು.
ಈ ತನಿಖೆಯಲ್ಲಿ ನಾನು ಮಧ್ಯ ಪ್ರವೇಶಿಸಲ್ಲ. ಎಸ್ ಐಟಿ ಕಾನೂನು ಬದ್ಧವಾಗಿ ತನಿಖೆ ನಡೆಸುತ್ತಿದೆ. ರಮೇಶ್ ಜಾರಕಿಹೊಳಿ ಬಂಧನದ ಬಗ್ಗೆ ಎಸ್ ಐಟಿ ನಿರ್ಧಾರ ಮಾಡುತ್ತದೆ ಎಂದು ಗೃಹ ಸಚಿವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ರಮೇಶ್ ಜಾರಕಿಹೊಳಿ ಅವರನ್ನ ಬಂಧನ ಮಾಡಿ ಅಂತ ಕೇಳುವ ನೈತಿಕತೆ ಕಾಂಗ್ರೆಸ್‍ಗೆ ಇಲ್ಲ -ಗೃಹ ಸಚಿವ

