ಸಿಡಿ ಪ್ರಕರಣ: ಸಂತ್ರಸ್ತ ಯುವತಿಗೆ ವೈದ್ಯಕೀಯ ಪರೀಕ್ಷೆ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿಗೆ ಬುಧವಾರ ವೈದ್ಯಕೀಯ ಪರೀಕ್ಷೆ ನಡೆಸಲಾಯಿತು.
ಸಂತ್ರಸ್ತ ಯುವತಿಗೆ ಬೆಳಿಗ್ಗೆ ನಗರದ ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ಮಾಡಲಾಗಿದೆ.
ಕೊರೋನಾ ಟೆಸ್ಟ್ ಸಹ ಯವತಿಗೆ ಮಾಡಲಾಗಿದ್ದು ನೆಗೆಟಿವ್ ವರದಿ ಬಂದಿದೆ.