ಬೆಂಗಳೂರು: ಆಪರೇಷನ್ ಕಮಲ ಪ್ರಕರಣ ಸಂಬಂಧ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ದೇವದುರ್ಗ ಠಾಣೆ ಪೆÇಲೀಸರು ದಾಖಲಿಸಿರುವ ಎಫ್ ಐಆರ್ ಗೆ ನೀಡಿದ್ದ ತಡೆಯಾಜ್ಞೆಯನ್ನು ಹೈಕೋರ್ಟ್ ತೆರವುಗೊಳಿಸಿದೆ.
ದೇವದುರ್ಗ ಠಾಣೆ ಪೆÇಲೀಸರು ತಮ್ಮ ವಿರುದ್ಧ ದಾಖಲಿಸಿರುವ ಎಫ್ ಐಆರ್ ತೆರವು ಮಾಡಬೇಕೆಂದು ಕೋರಿ ಬಿಎಸ್ ವೈ ಕಲಬುರ್ಗಿ ಹೈಕೋರ್ಟ್ ಪೀಠದಲ್ಲಿ ಅರ್ಜಿ ಸಲ್ಲಿಸಿದ್ದರು.
ಇದೇ ವೇಳೆ ಶಾಸಕರಾದ ಶಿವನಗೌಡ ನಾಯಕ್, ಪ್ರೀತಮ್ ಗೌಡ ಹಾಗೂ ಎಂ.ಬಿ ಮರಮಕಲ್ ಪ್ರತ್ಯೇಕವಾಗಿ ಮತ್ತೊಂದು ಅರ್ಜಿ ಸಲ್ಲಿಸಿ ಎಫ್ ಐಆರ್ ರದ್ದು ಕೋರಿದ್ದರು.
ನ್ಯಾ. ಜಾನ್ ಮೈಕೆಲ್ ಕುನ್ಹ ಅವರಿದ್ದ ಏಕಸದಸ್ಯ ಪೀಠ ಈ ಅರ್ಜಿ ವಿಚಾರಣೆ ನಡೆಸಿ, ಈ ಮೊದಲು ಎಫ್ ಐಆರ್‍ಗೆ ನೀಡಿದ್ದ ತಡೆಯಾಜ್ಞೆಯನ್ನು ತೆರವು ಮಾಡಿ ಆದೇಶಿಸಿದೆ.
ಬಿಜೆಪಿ ಸರ್ಕಾರ ರಚಿಸುವ ಸಂದರ್ಭದಲ್ಲಿ ಬಿ.ಎಸ್ ಯಡಿಯೂರಪ್ಪ ಅವರು ತಮ್ಮ ತಂದೆಗೆ ಜೆಡಿಎಸ್ ಬಿಟ್ಟು ಬಿಜೆಪಿ ಪಕ್ಷ ಸೇರುವಂತೆ ಆಮಿಷ ಒಡ್ಡಿದ್ದರು ಎಂದು ಆರೋಪಿಸಿ ಗುರುಮಿಠಕಲ್ ವಿಧಾನಸಭಾ ಕ್ಷೇತ್ರದ ಶಾಸಕ ನಾಗನಗೌಡ ಕಂದಕೂರ್ ಅವರ ಪುತ್ರ ಶರಣಗೌಡ ದೇವದುರ್ಗ ಠಾಣೆ ಪೆÇಲೀಸರಿಗೆ ದೂರು ನೀಡಿದ್ದರು.
ಬಿಎಸ್‍ವೈ ವಿರುದ್ಧ ತನಿಖೆಗೆ ಹೈಕೋರ್ಟ್ ಅಸ್ತು

