ನವದೆಹಲಿ: ಸೂಪರ್‍ಸ್ಟಾರ್ ರಜನಿಕಾಂತ್ ಅವರು 51ನೇ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಭಾರತ ಚಿತ್ರರಂಗದಲ್ಲಿನ ಜೀವಮಾನ ಸಾಧನೆಗಾಗಿ ತಮಿಳು
ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಈ ಕುರಿತು ಸುದ್ದಿಗೋಷ್ಠೀ ನಡೆಸಿ ಮಾಹಿತಿ ನೀಡಿದ್ದಾರೆ.
ಭಾರತೀಯ ಚಲನಚಿತ್ರ ಇತಿಹಾಸದ ಖ್ಯಾತ ನಟ ರಜಿನಿಕಾಂತ್ ಜೀ ಅವರಿಗೆ 2020ನೇ ಸಾಲಿನ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ನೀಡಲಾಗುತ್ತಿದೆ ಎಂದು ಘೋಷಿಸಲು ಬಹಳ ಸಂತೋಷವಾಗಿದೆ ಎಂದಿದ್ದಾರೆ.
ಈ ಬಾರಿಯ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು 50 ವರ್ಷಗಳಿಂದ ಭಾರತ ಚಿತ್ರರಂಗದಲ್ಲಿ ಸಾಧನೆ ಮಾಡಿರುವ ರಜಿನಿಕಾಂತ್‍ಗೆ ನೀಡಿ ಗೌರವಿಸಲಾಗುತ್ತಿದೆ ಎಂದು ಹೇಳಿದರು.

