ಸಿಡಿ ಪ್ರಕರಣಕ್ಕೂ ನನಗೂ ಸಂಬಂಧ ಇಲ್ಲ -ಡಿಕೆಶಿ

ಬೆಂಗಳೂರು: ಸಿಡಿ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ನಗರದಲ್ಲಿ ಡಿಕೆಶಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಗುರುವಾರ ಮಾತನಾಡಿದರು.
ಸಿಡಿ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧ ಇಲ್ಲ. ನನ್ನ ಹೆಸರು ಹೇಳಿದರೆ ಅವರಿಗೆ ಮಾರ್ಕೆಟಿಂಗ್ ಆಗುತ್ತದೆ. ಹೀಗಾಗಿ ಸಿಡಿ ಪ್ರಕರಣದಲ್ಲಿ ನನ್ನ ಹೆಸರು ಬಳಸಿಕೊಳ್ಳಲಾಗುತ್ತಿದೆ ಎಂದು ಡಿಕೆಶಿ ಹೇಳಿದರು.
ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಈಶ್ವರಪ್ಪ ಪತ್ರ ಬರೆದ ವಿಚಾರ ಕುರಿತು ಪ್ರತಿಕ್ರಿಯೆ ನೀಡಿದ ಡಿಕೆಶಿ, ಹಿರಿಯ ಸಚಿವರಿಗೇ ಮುಖ್ಯಮಂತ್ರಿಗಳ ಮೇಲೆ ನಂಬಿಕೆಯಿಲ್ಲ. ರೂ. 1200 ಕೋಟಿ ಅಕ್ರಮ ನಡೆದ ಬಗ್ಗೆ ಹೇಳಿದ್ದಾರೆ. ಕೂಡಲೇ ಯಡಿಯೂರಪ್ಪ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಇಲ್ಲವಾದರೆ ಸಚಿವರ ರಾಜೀನಾಮೆ ಪಡೆಯಬೇಕು. ಇಂದು ಸಂಜೆಯೊಳಗೆ ಸಿಎಂ ನಿರ್ಧರಿಸಬೇಕು ಎಂದು ಅವರು ಆಗ್ರಹಿಸಿದರು.