ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಸಿಡಿ ಪ್ರಕರಣ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ದೂರನ್ನು ದಾಖಲಿಸಲಾಗಿದೆ.
ಶ್ರೀಧರ್ ಮೂರ್ತಿ ಎಂಬುವವರು ಡಿಕೆ ಶಿವಕುಮಾರ್, ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್, ಶಂಕಿತ ಮಾಜಿ ಪತ್ರಕರ್ತ ನರೇಶ್ ಗೌಡ ಸೇರಿ 5 ಮಂದಿ ವಿರುದ್ಧ ಜಾರಿ ನಿರ್ದೇಶನಾಲಯಕ್ಕೆ ದೂರು ಸಲ್ಲಿಸಿದ್ದಾರೆ.
ಹನಿಟ್ರ್ಯಾಪ್ ಹಾಗೂ ಒಳಸಂಚಿಗೆ ಸುಮಾರು 500 ಕೋಟಿ ರೂ. ಅಕ್ರಮ ವ್ಯವಹಾರ ನಡೆದಿದ್ದು, ಇಸಿಐಆರ್ ದಾಖಲಿಸಿಕೊಂಡು ತನಿಖೆ ಮಾಡಬೇಕು ಎಂದು ಅವರು ದೂರಿನಲ್ಲಿ ಒತ್ತಾಯಿಸಿದ್ದಾರೆ.
ನಗರದ ಸದಾಶಿವನಗರ ಪೆÇಲೀಸ್ ಠಾಣೆಯಲ್ಲಿ ಶಾಸಕ ರಮೇಶ್ ಜಾರಕಿಹೊಳಿ ನೀಡಿರುವ ದೂರು ಆಧರಿಸಿ ತನಿಖೆ ನಡೆಸಬೇಕು ಎಂದು ದೂರುದಾರರು ದೂರಿನಲ್ಲಿ ತಿಳಿಸಿದ್ದಾರೆ.
ಸಿಡಿ ಪ್ರಕರಣ: ಡಿಕೆ ಶಿವಕುಮಾರ್ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ದೂರು

