ಮಾವೋವಾದಿಗಳ ವಿರುದ್ಧ ಕೇಂದ್ರ ಸರ್ಕಾರ ಹೋರಾಟ ತೀವ್ರಗೊಳಿಸಲಿದೆ -ಅಮಿತ್ ಶಾ

ರಾಯ್‍ಪುರ: ನಕ್ಸಲ್ ಭೀತಿಯನ್ನು ಕೊನೆಗೊಳಿಸಲು ಮಾವೋವಾದಿಗಳ ವಿರುದ್ಧ ಕೇಂದ್ರ ಸರ್ಕಾರ ಹೋರಾಟ ತೀವ್ರಗೊಳಿಸಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹೇಳಿದರು.
ಛತ್ತೀಸ್‍ಗಡದ ಬಸ್ತಾರ್ ಪ್ರದೇಶದಲ್ಲಿ ನಕ್ಸಲರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಹುತಾತ್ಮರಾದ 22 ಭದ್ರತಾ ಸಿಬ್ಬಂದಿಗೆ ಅಮಿತ್ ಶಾ ಸೋಮವಾರ ಗೌರವ ನಮನ ಸಲ್ಲಿಸಿದರು.
ನಂತರ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿದರು.
ಸಭೆ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಕೇಂದ್ರ ಗೃಹ ಸಚಿವರು, ನಕ್ಸಲರ ವಿರುದ್ಧದ ಹೋರಾಟವನ್ನು ನಿರ್ಣಾಯಕ ಹಂತಕ್ಕೆ ತೆಗೆದುಕೊಂಡು ಹೋಗಲಾಗುವುದು ಮತ್ತು ಭದ್ರತಾ ಸಿಬ್ಬಂದಿಯ ತ್ಯಾಗವನ್ನು ಸದಾ ನೆನಪಿಸಿಕೊಳ್ಳಲಾಗುವುದು ಎಂದು ಹೇಳಿದರು.