ಬೆಂಗಳೂರು: ಸಾರಿಗೆ ನೌಕರರಿಗೆ 6ನೇ ವೇತನ ಆಯೋಗದಂತೆ ಸಂಬಳ ನೀಡಲು ಸಾಧ್ಯವಿಲ್ಲ ಎಂದು ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ತಿಳಿಸಿದ್ದಾರೆ.
ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಮಂಗಳವಾರ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಸಭೆ ನಡೆಯಿತು. ಸಭೆ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಸಿ.ಎಸ್ ರವಿಕುಮಾರ್ ಅವರು ಮಾತನಾಡಿದರು.
ಸಾರಿಗೆ ನೌಕರರು ಏ. 7ರಂದು ಮುಷ್ಕರಕ್ಕೆ ಮುಂದಾದರೆ ಕಠಿಣ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಸಿಎಸ್ ಪಿ.ರವಿಕುಮಾರ್ ಎಚ್ಚರಿಕೆ ನೀಡಿದ್ದಾರೆ.
ಸಾರಿಗೆ ನೌಕರರು ಮುಷ್ಕರಕ್ಕೆ ಮುಂದಾದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಎಸ್ಮಾ ಜಾರಿ ಮಾಡುವ ಸಂಬಂಧ ಚರ್ಚೆ ಸಹ ಮಾಡಲಾಗಿದೆ ಎಂದು ರವಿಕುಮಾರ್ ಹೇಳಿದರು.
ಸಾರಿಗೆ ನೌಕರರ ಬೇಡಿಕೆಯಾಗಿರುವ 6ನೇ ವೇತನದ ಸಂಬಳ ನೀಡಲು ಸಾಧ್ಯ ಇಲ್ಲ. ಬದಲಿಗೆ ಸಾರಿಗೆ ನೌಕರರಿಗೆ ಶೇ. 8ರಷ್ಟು ವೇತನ ಹೆಚ್ಚಳಕ್ಕೆ ತೀರ್ಮಾನ ಕೈಗೊಳ್ಳಲಾಗಿದೆ ಎಂದರು.
ಕೋವಿಡ್ ಹಿನ್ನೆಲೆ ಮುಷ್ಕರ ಕೈಬಿಡಿ. ನಿಮ್ಮ 8 ಬೇಡಿಕೆ ಈಡೇರಿಸಿದ್ದೇವೆ. ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ವೇತನ ಹೆಚ್ಚಳ ಮಾಡಲು ಸಾಧ್ಯವಾಗುತ್ತಿಲ್ಲ. ಲಾಕ್ ಡೌನ್ ಸಮಯದಲ್ಲೂ ಸಂಬಳ ನೀಡಲಾಗಿದೆ ಎಂದವರು ತಿಳಿಸಿದರು.
ಸಾರಿಗೆ ನೌಕರರಿಗೆ 6ನೇ ವೇತನ ಆಯೋಗದಂತೆ ಸಂಬಳ ನೀಡಲು ಸಾಧ್ಯವಿಲ್ಲ -ಸಿ.ಎಸ್ ರವಿಕುಮಾರ್

