ಮೈಸೂರು: ಮುಷ್ಕರ ನಿರತ ಸಾರಿಗೆ ನೌಕರರ ಮಾರ್ಚ್ ತಿಂಗಳ ವೇತನ ತಡೆಗೆ ರಾಜ್ಯ ಸರ್ಕಾರ ಮುಂದಾಗಿದೆ.
ಆರನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಸಾರಿಗೆ ನೌಕರರು ಬುಧವಾರದಿಂದ ರಾಜ್ಯಾದ್ಯಂತ ಅನಿರ್ದಿಷ್ಟವಾಧಿ ಮುಷ್ಕರ ನಡೆಸುತ್ತಿದ್ದಾರೆ. ಏತನ್ಮಧ್ಯೆ ಮುಷ್ಕರ ನಿರತ ಸಾರಿಗೆ ನೌಕರರ ವೇತನ ತಡೆಗೆ ರಾಜ್ಯ ಸರ್ಕಾರ ಮುಂದಾಗಿದೆ.
ರಾಜ್ಯದ 1.30 ಸಾವಿರ ಸಾರಿಗೆ ನೌಕರರ ಮಾರ್ಚ್ ತಿಂಗಳ ವೇತನ ತಡೆಹಿಡಿಯಲು ರಾಜ್ಯ ಸರ್ಕಾರ ನಾಲ್ಕು ಸಾರಿಗೆ ನಿಗಮಗಳಿಗೆ ಸೂಚನೆ ನೀಡಿದೆ ಎಂದು ತಿಳಿದು ಬಂದಿದೆ.
ಸಾರಿಗೆ ನೌಕರರ ಮಾರ್ಚ್ ತಿಂಗಳ ವೇತನ ತಡೆಗೆ ಮುಂದಾದ ಸರ್ಕಾರ

