ಸಾರಿಗೆ ನೌಕರರು ಮುಷ್ಕರ ಕೈಬಿಟ್ಟು ಕೆಲಸಕ್ಕೆ ಬನ್ನಿ -ಸಿಎಂ ಬಿಎಸ್ ವೈ

ಬೆಂಗಳೂರು: ಸಾರಿಗೆ ನೌಕರರು ಮುಷ್ಕರ ಕೈಬಿಟ್ಟು ಕೆಲಸಕ್ಕೆ ಬನ್ನಿ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮನವಿ ಮಾಡಿದ್ದಾರೆ.
ನಗರದಲ್ಲಿ ಶುಕ್ರವಾರ ಸಿಎಂ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ಯಾವ ಕಾರಣಕ್ಕೂ 6ನೇ ವೇತನ ಆಯೋಗ ಜಾರಿ ಇಲ್ಲ ಎಂದು ಸಿಎಂ ಹೇಳಿದರು.
ಸಾರಿಗೆ ನೌಕರರ 9 ಬೇಡಿಕೆಗಳಲ್ಲಿ 8 ಬೇಡಿಕೆಗಳನ್ನು ಈಡೇರಿಸಲಾಗಿದೆ. ಇದರಲ್ಲಿ ಏನಾದರೂ ಸಮಸ್ಯೆ ಇದ್ದರೇ ಹೇಳಿ ಬಗೆ ಹರಿಸೋಣ ಎಂದು ಸಿಎಂ ತಿಳಿಸಿದರು.
ನಾನು ಹಠ ಮಾಡುತ್ತಿಲ್ಲ. ರಾಜ್ಯದ ಹಣಕಾಸು ಪರಿಸ್ಥಿತಿ ಅರ್ಥ ಮಾಡಿಕೊಳ್ಳಿ. ಹಠ ಮಾಡದೇ ಮುಷ್ಕರ ಕೈಬಿಟ್ಟು ಕೆಲಸಕ್ಕೆ ಬನ್ನಿ ಎಂದು ಮುಕ್ಯಮಂತ್ರಿಗಳು ಮನವಿ ಮಾಡಿದರು.
ಯಾವ ಕಾರಣಕ್ಕೂ 6ನೇ ವೇತನ ಆಯೋಗ ಜಾರಿ ಇಲ್ಲ. ಸಾರಿಗೆ ನೌಕರರ ಜತೆ ಮಾತುಕತೆ ಇಲ್ಲ. ನೌಕರರ ಸಂಬಳಕ್ಕೆ ಶೇ. 85ರಷ್ಟು ಖರ್ಚಾಗುತ್ತಿದೆ ಎಂದು ಸಿಎಂ ತಿಳಿಸಿದರು.