ಬೆಂಗಳೂರು: ರಾಜ್ಯಾದ್ಯಂತ ಬೇಸಿಗೆ ಬೇಗೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಸರ್ಕಾರಿ ಕಚೇರಿಗಳ ಸಮಯವನ್ನು ಬದಲಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಬೆಳಗ್ಗೆ 8 ರಿಂದ ಮಧ್ಯಾಹ್ನ 1.30 ವರೆಗೆ ಸರ್ಕಾರಿ ಕಚೇರಿ ಕೆಲಸದ ಅವಧಿಯನ್ನು ನಿಗಧಿಪಡಿಸಲಾಗಿದೆ.
ಬೆಳಗಾವಿ ವಿಭಾಗದ ವಿಜಯಪುರ, ಬಾಗಲಕೋಟೆ, ಕಲಬುರಗಿ ವಿಭಾಗದ ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿಗಳ ಕೆಲಸದ ಸಮಯವನ್ನು ಬದಲಾವಣೆ ಮಾಡಲಾಗಿದೆ.
ಈ ಹೊಸ ಸಮಯ ಬದಲಾವಣೆ ಏ. 12ರಿಂದ ಜಾರಿಗೆ ಬರಲಿದೆ.
ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಹೆಚ್ಚಿನ ಬೇಸಿಗೆ ಶಾಖ ಇರುವ ಕಾರಣ ಸರಕಾರಿ ಕಚೇರಿ ಸಮಯವನ್ನು ಬದಲಾವಣೆ ಮಾಡಲಾಗಿದೆ.
ಉತ್ತರ ಕರ್ನಾಟಕದ ಸರ್ಕಾರಿ ಕಚೇರಿ ಸಮಯ ಬದಲಾವಣೆ

