ಬೀದರ್: ಜನ ಸಹಕರಿಸದಿದ್ದರೆ ಲಾಕ್ ಡೌನ್ ಅನಿವಾರ್ಯ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು.
ನಗರದಲ್ಲಿ ಸೋಮವಾರ ಸಿಎಂ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ಲಾಕ್ ಡೌನ್ ಮಾಡಬಾರದು ಎಂದಾದರೆ ಜನರು ಸಹಕಾರ ನೀಡಬೇಕು ಎಂದು ಯಡಿಯೂರಪ್ಪ ತಿಳಿಸಿದರು.
ಬೆಂಗಳೂರು ಸೇರಿದಂತೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಜನರು ಅನಿವಾರ್ಯವಾದರೆ ಮಾತ್ರ ಮನೆಯಿಂದ ಹೊರಗೆ ಬರಬೇಕು, ಜನಜಂಗುಳಿ ಸೇರಬಾರದು, ಅಂತರ ಕಾಯ್ದುಕೊಳ್ಳಬೇಕು, ಮಾಸ್ಕ್ ಧರಿಸಬೇಕು, ಸ್ಯಾನಿಟೈಸ್ ಮಾಡಿಕೊಳ್ಳಬೇಕು ಎಂದು ಸಿಎಂ ಹೇಳಿದರು.
ಕೊರೊನಾ ಹೆಚ್ಚಾಗಿರುವ ಜಿಲ್ಲೆಗಳಲ್ಲಿ ನೈಟ್ ಕಫ್ರ್ಯೂ ಮಾಡಲಾಗಿದೆ. ಅದಕ್ಕೆ ಜನರು ಸ್ಪಂದಿಸಬೇಕು, ಇಲ್ಲದಿದ್ದರೆ ಬಿಗಿಯಾದ ಕ್ರಮವನ್ನು ಸರ್ಕಾರ ಕ್ರಮ ಕೈಗೊಳ್ಳಬೇಕಾಗುತ್ತದೆ. ಲಾಕ್ ಡೌನ್ ಅನಿವಾರ್ಯವಾಗಿ ಮಾಡಬೇಕಾಗುತ್ತದೆ ಅದಕ್ಕೆ ಆಸ್ಪದ ಕೊಡಬೇಡಿ ಎಂದು ಮುಖ್ಯಮಂತ್ರಿ ಜನತೆಯಲ್ಲಿ ಮನವಿ ಮಾಡಿಕೊಂಡರು.
ಜನರು ಸಹಕರಿಸದಿದ್ದರೆ ಲಾಕ್ ಡೌನ್ ಅನಿವಾರ್ಯ -ಸಿಎಂ ಬಿಎಸ್ ವೈ

