ಬೀದರ್: ಸದ್ಯಕ್ಕೆ ಲಾಕ್ಡೌನ್ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.
ಬೀದರ್‍ನ ಬಸವಕಲ್ಯಾಣದಲ್ಲಿ ಸಿಎಂ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ಸದ್ಯಕ್ಕೆ ಲಾಕ್ಡೌನ್ ಪ್ರಶ್ನೆಯೇ ಇಲ್ಲ ಎಂದು ಹೇಳಿರುವ ಸಿಎಂ, ಇದೆಲ್ಲವನ್ನೂ ಸ್ಪಷ್ಟವಾಗಿ ನಿರಾಕರಿಸಿ ರಾಜ್ಯದಲ್ಲಿ ಸದ್ಯಕ್ಕೆ ಲಾಕ್ಡೌನ್ ಪ್ರಶ್ನೆಯೇ ಇಲ್ಲ ಎಂದರು.
ನಾನು ಕೂಡಾ ಸಲಹಾ ಸಮಿತಿಯಲ್ಲಿ ಇದ್ದೇನೆ. ಯಾರೂ ಲಾಕ್ಡೌನ್‍ಗೆ ಸೂಚನೆ ನೀಡಿಲ್ಲ. ಸುಮ್ಮನೇ ತಪ್ಪು ಹೇಳಬೇಡಿ. ಕರ್ನಾಟಕದಲ್ಲಿ ಸದ್ಯಕ್ಕೆ ಲಾಕ್ಡೌನ್ ಮಾಡುವ ಪ್ರಶ್ನೆ ಇಲ್ಲವೇ ಇಲ್ಲ ಎಂದರು ಸಿಎಂ ಬಿಎಸ್ ವೈ.
ಕೊರೊನಾ ತಡೆಯಲು ಜನತೆ ಸಹಕಾರ ನೀಡಬೇಕು. ಜನರು ಇದನ್ನು ಮರೆತರೆ ಅನಾಹುತ ಆಗಲಿದೆ. ಕೊರೊನಾ ತಡೆ ಬಗ್ಗೆ ಸರ್ವಪಕ್ಷ ಸಭೆಯಲ್ಲಿ ಸಲಹೆ ಪಡೆದು ತೀರ್ಮಾನಿಸುತ್ತೇವೆ. ಏನೇನು ಮಾಡಬೇಕೆಂದು ನಂತರ ನಿರ್ಧರಿಸುತ್ತೇವೆ ಎಂದು ಮುಖ್ಯಮಂತ್ರಿಗಳು ಹೇಳಿದರು.
ಪ್ರಶ್ನೆಯೊಂದಕ್ಕೆ ಉತ್ತರಿಸಿದ ಯಡಿಯೂರಪ್ಪ, ಸರ್ವಪಕ್ಷ ಸಭೆಗೆ ಬರುವುದಿಲ್ಲವೆಂಬ ಡಿ.ಕೆ.ಶಿವಕುಮಾರ್ ಹೇಳಿಕೆಗೆ, ಸಭೆ ಕರೆಯಿರಿ ಎಂದು ಅವರೇ ಹೇಳಿದ್ದು ಈಗ ಬರಲ್ಲ ಅಂತಾರೆ. ಸಭೆಗೆ ಕರೆಯುತ್ತೇವೆ, ಬರುವುದು, ಬಿಡುವುದು ಅವರಿಗೆ ಬಿಟ್ಟಿದ್ದು ಎಂದರು.
ಸದ್ಯಕ್ಕೆ ಲಾಕ್ಡೌನ್ ಪ್ರಶ್ನೆಯೇ ಇಲ್ಲ -ಸಿಎಂ ಬಿಎಸ್ ಯಡಿಯೂರಪ್ಪ

