ಅಗತ್ಯವಿದ್ದರೇ ನೈಟ್ ಕಫ್ರ್ಯೂ ಮುಂದುವರಿಕೆ -ಸಿಎಂ ಬಿಎಸ್ ವೈ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ 2ನೇ ಅಲೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ 8 ನಗರಗಳಲ್ಲಿ ನೈಟ್ ಕಫ್ರ್ಯೂ ಜಾರಿ ಮಾಡಲಾಗಿದ್ದು, ಅಗತ್ಯವಿದ್ದರೇ ನೈಟ್ ಕಫ್ರ್ಯೂ ಮುಂದುವರಿಸಲಾಗುವುದು ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದರು.
ಮಾಧ್ಯಮ ಪ್ರತಿನಿಧಿಗಳೊಂದಿಗೆ ಬುಧವಾರ ಮುಖ್ಯಮಂತ್ರಿಗಳು ಮಾತನಾಡಿದರು.
ಕೊರೊನಾ ನಿಯಂತ್ರಣಕ್ಕೆ ಈಗಾಗಲೇ ಹಲವು ಕ್ರಮ ಕೈಗೊಳ್ಳಲಾಗಿದೆ. 8 ಜಿಲ್ಲೆಗಳಲ್ಲಿ ಏ. 20ರ ವರೆಗೆ ನೈಟ್ ಕಫ್ರ್ಯೂ ಜಾರಿಯಲ್ಲಿದೆ. ತಜ್ಞರ ಜತೆ ಚರ್ಚಿಸಿ ಅಗತ್ಯವಿದ್ದರೇ ನೈಟ್ ಕಫ್ರ್ಯೂ ವಿಸ್ತರಿಸುವ ಬಗ್ಗೆ ಚಿಂತನೆ ನಡೆಸಲಾಗುವುದು ಎಂದು ಬಿಎಸ್ ವೈ ಹೇಳಿದರು.
ಪ್ರಶ್ನೆಯೊಂದಕ್ಕೆ ಉತ್ತರಿಸಿದ ಸಿಎಂ ಲಾಕ್ ಡೌನ್, ವೀಕೆಂಡ್ ಲಾಕ್ ಡೌನ್ ಪ್ರಸ್ತಾಪವಿಲ್ಲ. ಲಾಕ್ ಡೌನ್ ಸಂಬಂಧ ಸರ್ವಪಕ್ಷಗಳ ಸಭೆಯಲ್ಲಿ ಚರ್ಚೆ ನಡೆಸಿ ನಂತರ ನಿರ್ಧಾರ ಮಾಡಲಾಗುತ್ತದೆ ಎಂದು ತಿಳಿಸಿದರು.