ಬೆಂಗಳೂರು: ಸಿಬಿಎಸ್‍ಇನಂತೆ ನಮ್ಮ ರಾಜ್ಯದಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆ ರದ್ದತಿ ಬಗ್ಗೆ ಚಿಂತನೆ ನಡೆದಿಲ್ಲ ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.
ಈ ಕುರಿತು ಸಚಿವ ಸುರೇಶ್ ಕುಮಾರ್ ಅವರು ಟ್ವೀಟ್ ಮಾಡಿದ್ದಾರೆ.
ಸಿಬಿಎಸ್‍ಇ ನಿರ್ಧಾರದ ಹಿನ್ನೆಲೆಯಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳ ರದ್ದತಿಗೆ ಸಂಬಂಧಿಸಿದಂತೆ ರಾಜ್ಯವು ಏನನ್ನೂ ನಿರ್ಧರಿಸಿಲ್ಲ ಎಂದು ಸಚಿವರು ತಿಳಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಸಚಿವರು ಸಿಬಿಎಸ್‍ಇ ಹತ್ತನೇ ತರಗತಿಗಳ ಪರೀಕ್ಷೆ ರದ್ದಾದ ಹಿನ್ನೆಲೆಯಲ್ಲಿ ನಮ್ಮ ರಾಜ್ಯದ ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳ ಕುರಿತು ಈಗಾಗಲೇ ಊಹಾಪೆÇೀಹ ಏಳತೊಡಗಿದೆ.
ನಮ್ಮ ರಾಜ್ಯದ ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳು ಪ್ರಾರಂಭ ವಾಗಬೇಕಿರುವುದು 21.6.2021 ರಿಂದ, ಅಂದರೆ ಜೂನ್ 21 ರಿಂದ. ಆದ್ದರಿಂದ ಈಗ ನಮ್ಮ ರಾಜ್ಯದಲ್ಲಿ ಸಿಬಿಎಸ್‍ಇ ರೀತಿ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಮುಂದಿನ ದಿನಗಳಲ್ಲಿ ಪರಿಸ್ಥಿತಿ ಅವಲೋಕಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಟ್ವೀಟ್ ನಲ್ಲಿ ತಿಳಿಸಿದ್ದಾರೆ.
ರಾಜ್ಯದಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆ ರದ್ದತಿ ಬಗ್ಗೆ ಚಿಂತನೆ ನಡೆದಿಲ್ಲ -ಸಚಿವ ಸುರೇಶ್ ಕುಮಾರ್

