ನಾಯಕರ ಜತೆ ಚರ್ಚಿಸಿ ಸರ್ವಪಕ್ಷ ಸಭೆ ಬಗ್ಗೆ ತೀರ್ಮಾನ -ಡಿಕೆಶಿ

ಬೆಂಗಳೂರು: ಕೊರೊನಾ ವಿಚಾರವಾಗಿ ಸರ್ಕಾರ ಕರೆದಿರುವ ಸರ್ವಪಕ್ಷ ಸಭೆಯಲ್ಲಿ ಭಾಗವಹಿಸುವುದು ಕೇವಲ ನನ್ನ ನಿರ್ಧಾರವಲ್ಲ. ಈ ಬಗ್ಗೆ ನಮ್ಮ ನಾಯಕರೊಂದಿಗೆ ಚರ್ಚೆ ಮಾಡಿ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.
ನಗರದಲ್ಲಿ ಬುಧವಾರ ಡಿಕೆಶಿವಕುಮಾರ್ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ಸರ್ಕಾರ ಈವರೆಗೂ ನಮ್ಮ ಸಲಹೆ ಕೇಳಿಲ್ಲ. ಅವರ ಇಚ್ಛೆಯಂತೆ ನಿರ್ಧಾರ ತೆಗೆದುಕೊಂಡಿದ್ದಾರೆ. ಪರಿಸ್ಥಿತಿ ಕೈಮೀರಿರುವ ಹಿನ್ನೆಲೆಯಲ್ಲಿ ಈಗ ಸರ್ವಪಕ್ಷ ಸಭೆ ಕರೆದಿದ್ದಾರೆ. ಅವರು ಸರ್ವಪಕ್ಷ ಸಭೆ ಕರೆಯುವ ಬಗ್ಗೆ ಮಾಧ್ಯಮಗಳಲ್ಲಿ ನೋಡಿದ್ದೇವೆ. ನಮಗೆ ಇನ್ನು ಅಧಿಕೃತವಾಗಿ ಮಾಹಿತಿ ಬಂದಿಲ್ಲ ಎಂದರು.
ಕೊರೊನಾ ಹೆಸರಿನಲ್ಲಿ ಸಾಕಷ್ಟು ಭ್ರμÁ್ಟಚಾರ ಮಾಡಿದ್ದಾರೆ. ಅದನ್ನು ನಾವು ಪ್ರಶ್ನೆ ಮಾಡಿದರೂ ಲೆಕ್ಕಿಸದೆ, ನೀವು ಎμÁ್ಟದರೂ ಅರಚಿಕೊಳ್ಳಿ ನಾವು ಮಾಡಿದ್ದೆ ಸರಿ ಎಂಬ ಧೋರಣೆ ಅನುಸರಿಸಿದ್ದಾರೆ. ಅವೈಜ್ಞಾನಿಕ ನೈಟ್ ಕಫ್ರ್ಯು ಅಗತ್ಯವಿಲ್ಲ. ಆದರೂ ಜಾರಿಗೊಳಿಸಿದ್ದಾರೆ.
ಕೇಂದ್ರ ಸರ್ಕಾರ ಲಸಿಕೆ ರಫ್ತು ನಿಲ್ಲಿಸಿ ದೇಶದ ಜನರಿಗೆ ಮೊದಲು ನೀಡಲಿ ಎಂದು ಡಿಕೆಶಿ ಹೇಳಿದರು.
ವೈಯಕ್ತಿಕವಾಗಿ ಲಾಕ್ ಡೌನ್ ವಿಚಾರದಲ್ಲಿ ಹೇಳುವುದಾದರೆ ಇದರ ಅಗತ್ಯವಿಲ್ಲ. ಜನ ಈಗಾಗಲೇ ನರಳುತ್ತಿದ್ದಾರೆ. ಲಾಕ್ ಡೌನ್ ಅಗತ್ಯವಿಲ್ಲ. ಮುಂಜಾಗ್ರತೆ ದೃಷ್ಟಿಯಿಂದ ಅಗತ್ಯ ಕ್ರಮ ಕೈಗೊಳ್ಳಬೇಕು. ಅವರಿಗೆ ಈ ಪರಿಸ್ಥಿತಿ ನಿಭಾಯಿಸಲು ಆಗುತ್ತಿಲ್ಲ ಹೀಗಾಗಿ ನೆಪ ಹುಡುಕುತ್ತಿದ್ದಾರೆಂದು ಡಿಕೆಶಿ ಟೀಕಿಸಿದರು.
ಜನರು ಈಗಾಗಲೇ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸರ್ಕಾರ ಅವರಿಗೆ ಆರ್ಥಿಕ ನೆರವನ್ನೂ ನೀಡುತ್ತಿಲ್ಲ. ಕೇಂದ್ರ ಸರ್ಕಾರ 20 ಲಕ್ಷ ಕೋಟಿ ಅಂತಾ ಹೇಳಿದರು, ರಾಜ್ಯ ಸರ್ಕಾರ 1600 ಕೋಟಿ ಪ್ಯಾಕೇಜ್ ಎಂದರು. ಯಾರಿಗೂ ಸಹಾಯವಾಗಿಲ್ಲ. ಒಂದು ಕಡೆ ಜೀವ, ಮತ್ತೊಂದು ಕಡೆ ಜೀವನ. ಇವೆರಡರ ನಡುವೆ ಜನ ಸಿಲುಕಿದ್ದಾರೆಂದು ಅವರು ಹೇಳಿದರು.
ಅಂಬೇಡ್ಕರ್ ಅವರ ಸಂವಿಧಾನವೇ ನಮಗೆ ಭಗವದ್ಗೀತೆ, ಕುರಾನ್, ಬೈಬಲ್: ಇಂದು ಅಂಬೇಡ್ಕರ್ ಜಯಂತಿ ಆಚರಣೆ ಮಾಡುತ್ತಿದ್ದೇವೆ. ಅಂಬೇಡ್ಕರ್ ಅವರು ಕೊಟ್ಟಿರುವ ಸಂವಿಧಾನ ನಮ್ಮ ಪ್ರಜಾಪ್ರಭುತ್ವದ ಒಂದು ಭಾಗ. ನಾವೆಲ್ಲ ಸೇರಿ ಅದನ್ನು ಉಳಿಸಬೇಕಿದೆ.
ಅಂಬೇಡ್ಕರ್ ಅವರು ಕೊಟ್ಟ ಸಂವಿಧಾನವೇ ಈ ದೇಶಕ್ಕೆ ಭಗವದ್ಗೀತೆ, ಕುರಾನ್, ಬೈಬಲ್ ನಂತೆ ಎಂದು ಡಿಕೆಶಿವಕುಮಾರ್ ಹೇಳಿದರು.