ಬೆಂಗಳೂರು: ಕುಂಭಮೇಳದಿಂದ ಮರಳಿದವರು ಕೊರೊನಾ ಪರೀಕ್ಷೆಗೆ ಒಳಪಡಬೇಕು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಈ ಕುರಿತು ಸಚಿವ ಡಾ.ಕೆ.ಸುಧಾಕರ್ ಟ್ವೀಟ್ ಮಾಡಿದ್ದಾರೆ.
ಹರಿದ್ವಾರದಲ್ಲಿ ನಡೆಯುತ್ತಿರುವ ಪವಿತ್ರ ಕುಂಭಮೇಳದಲ್ಲಿ ಪಾಲ್ಗೊಂಡು ರಾಜ್ಯಕ್ಕೆ ಮರಳುವ ಯಾತ್ರಿಗಳು ವಾಪಸ್ಸಾದ ನಂತರ ಕಡ್ಡಾಯವಾಗಿ ತಮ್ಮ ಮನೆಗಳಲ್ಲಿ ಪ್ರತ್ಯೇಕಗೊಂಡು ಕೊರೊನಾ ಪರೀಕ್ಷೆಗೆ ಒಳಪಡಬೇಕು. ಕೊರೊನಾ ಪರೀಕ್ಷೆ ವರದಿಯಲ್ಲಿ ನೆಗಟೀವ್ ಬಂದ ನಂತರ ಯಾತ್ರಿಕರು ತಮ್ಮ ಎಂದಿನ ಕಾರ್ಯಗಳಲ್ಲಿ ತೊಡಗಬೇಕೆಂದು ಮನವಿ ಮಾಡುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
ಕುಂಭಮೇಳದಿಂದ ವಾಪಸ್ಸಾದವರು ಕೊರೊನಾ ಪರೀಕ್ಷೆಗೆ ಒಳಪಡಬೇಕು -ಡಾ.ಕೆ.ಸುಧಾಕರ್

