ಬೆಂಗಳೂರು: ರಾಜ್ಯದಲ್ಲಿ ಶುಕ್ರವಾರ 14,859 ಕೊರೊನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ.
24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೊನಾ ಸೋಂಕಿನಿಂದ 78 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಒಟ್ಟು ಸಾವಿನ ಸಂಖ್ಯೆ 13,190ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಬೆಂಗಳೂರಿನಲ್ಲಿ ಶುಕ್ರವಾರ 9917 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆ ಆಗಿದೆ. ನಗರದಲ್ಲಿ ಸೋಂಕಿಗೆ 57 ಮಂದಿ ಬಲಿಯಾಗಿದ್ದಾರೆ.
ರಾಜ್ಯದಲ್ಲಿಂದು 4031 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ. ಇನ್ನು 1,07315 ಸಕ್ರೀಯ ಪ್ರಕರಣಗಳಿದ್ದು, ಈ ಪೈಕಿ 577 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

