ಮಾಜಿ ಸಿಎಂ ಹೆಚ್.ಡಿ.ಕೆ.ಗೆ ಕೊರೊನಾ ಪಾಸಿಟಿವ್ ದೃಢ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಟ್ವಿಟ್ಟರ್ ನಲ್ಲಿ ಈ ಕುರಿತು ಕುಮಾರಸ್ವಾಮಿ ಅವರೇ ಮಾಹಿತಿ ನೀಡಿ, ನನ್ನ ಕೋವಿಡ್-19 ಪರೀಕ್ಷೆಯ ವರದಿ ಪಾಸಿಟಿವ್ ಎಂದು ಬಂದಿದೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಹೆಚ್.ಡಿ.ಕೆ. ಮನವಿ ಮಾಡಿದ್ದಾರೆ.
ಹೆಚ್.ಡಿಕೆ ಕೊರೊನಾ ವ್ಯಾಕ್ಸಿನ್ ಮೊದಲ ಡೋಸ್ ಪಡೆದಿದ್ದರು.