ಮೈಸೂರು: ಬಸವಕಲ್ಯಾಣ, ಮಸ್ಕಿ, ಬೆಳಗಾವಿ ಮೂರು ಕ್ಷೇತ್ರದಲ್ಲಿ ನಾವು ಗೆಲ್ಲುತ್ತೇವೆ ಎಂದು ಸಚಿವ ವಿ.ಸೋಮಣ್ಣ ಹೇಳಿದರು.
ನಗರದಲ್ಲಿ ಶನಿವಾರ ಸೋಮಣ್ಣ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ಉಪಚುನಾವಣೆಯಲ್ಲಿ ಹಣ ಹಂಚಿಕೆ ಮಾಡಲಾಗಿದೆ ಎಂಬ ಕಾಂಗ್ರೆಸ್ ನವರು ಮಾಡಿರುವ ಆರೋಪಕ್ಕೆ ಸೋಮಣ್ಣ ಪ್ರತಿಕ್ರಿಯಿಸಿ, ಸುಮ್ಮನೆ ಆರೋಪ ಮಾಡಬಾರದು. ನಿನ್ನೆ ಕಾಂಗ್ರೆಸ್ ನವರು ನನ್ನ ಜೊತೆಯಲ್ಲೆ ಇದ್ದರು. ಆಗ ನೇರವಾಗಿ ನನ್ನ ಬಳಿ ಹೇಳಲಿಲ್ಲ. ಈಗ ಮಾಧ್ಯಮಗಳಲ್ಲಿ ಆ ರೀತಿ ಹೇಳಿಕೆ ನೀಡಬಾರದು ಎಂದರು.
ಬೆಂಗಳೂರಿನಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದೆ. ಕೊರೊನಾ ನಿಯಂತ್ರಣಕ್ಕೆ ಕೆಲವು ಕ್ರಮ ತೆಗೆದುಕೊಳ್ಳುವುದು ಅನಿವಾರ್ಯ ಎಂದು ಅವರು ಹೇಳಿದರು.
ಬೆಂಗಳೂರಿನಲ್ಲಿ ಶವಸಂಸ್ಕಾರದ ವಿಚಾರವಾಗಿ ಒಂದೆರಡು ನ್ಯೂನತೆಗಳಿತ್ತು. ಅದನ್ನು ನಿನ್ನೆ ಸಭೆ ನಡೆಸಿ ಸರಿಪಡಿಸಲಾಗಿದೆ ಎಂದು ಸೋಮಣ್ಣನವರು ತಿಳಿಸಿದರು.
ಮುಖ್ಯಮಂತ್ರಿಗಳಿಗೆ ಅನಾರೋಗ್ಯ ಕಾರಣ ಸರ್ವಪಕ್ಷ ಸಭೆ ಮುಂದೂಡಲಾಗಿದೆ. ಮುಖ್ಯಮಂತ್ರಿ ನೇತೃತ್ವದಲ್ಲಿ ಸಭೆ ನಡೆಯದಿದ್ದರೆ ಅದಕ್ಕೆ ಗಾಂಭೀರ್ಯ ಇರುವುದಿಲ್ಲ. ಮೂರ್ನಾಲ್ಕು ದಿನದಲ್ಲಿ ಆರೋಗ್ಯದಿಂದ ಸಿಎಂ ಹೊರಬರುತ್ತಾರೆ. ಆ ನಂತರ ಸಭೆ ನಡೆಸಲಾಗುತ್ತೆ ಎಂದು ಸಚಿವ ವಿ.ಸೋಮಣ್ಣ ಹೇಳಿದರು.
ಉಪಚುನಾವಣೆಗೆ ಪ್ರಚಾರ ಮುಗಿದ ಬಳಿಕ ನಾನು ಕೋವಿಡ್ ಟೆಸ್ಟ್ ಮಾಡಿಸಿದ್ದೇನೆ. ನನ್ನ ವರದಿ ನೆಗೆಟಿವ್ ಬಂದಿದೆ. ನನ್ನಿಂದ ಬೇರೆಯವರಿಗೆ ತೊಂದರೆಯಾಗಬಾರದು ಅಂತ ತಕ್ಷಣ ಟೆಸ್ಟ್ ಮಾಡಿಸಿದೆ. ನನ್ನ ಜೊತೆ ಬಂದವರು ಟೆಸ್ಟ್ ಮಾಡಿಸಿದ್ದಾರೆ.ಅವರುಗಳ ವರದಿ ಕೂಡ ನೆಗೆಟಿವ್ ಇದೆ ಎಂದು ಹೇಳಿದರು.
3 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು -ಸಚಿವ ವಿ. ಸೋಮಣ್ಣ

