ಬೆಂಗಳೂರು: ನಾಡಿನ ಖ್ಯಾತ ಸಂಶೋದಕರು, ಆಗಿದ್ದ ವೆಂಕಟಸುಬ್ಬಯ್ಯ ಅವರು ನಿಧನ ಹೊಂದಿದ್ದಾರೆ.
ನಿಘಂಟು ತಜ್ಞರೂ ಆಗಿದ್ದ ವೆಂಕಟಸುಬ್ಬಯ್ಯ ಅವರು ಸೋಮವಾರ ರಾತ್ರಿ 1.15ರ ವೇಳೆಗೆ ತಮ್ಮ ವಯೋ ಸಹಜ ಕಾರಣಗಳಿಂದ 108ನೇ ವಯಸ್ಸಿನಲ್ಲಿ ನಿಧನರಾದರು.
ನಾಡೋಜ ಪೆÇ್ರ.ಜಿ. ವೆಂಕಟಸುಬ್ಬಯ್ಯ ಅವರು ಖ್ಯಾತ ವಿದ್ವಾಂಸರು ಮಾತ್ರವಲ್ಲದೆ ಜನಪ್ರಿಯ ಪ್ರಾಧ್ಯಾಪಕರು.
ಅವರು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಸುವರ್ಣ ಪದಕದೊಡನೆ ಎಂ.ಎ. ಪದವಿ, ನಂತರ ಬಿ.ಟಿ. ಪದವಿ ಪಡೆದಿದ್ದರು. ಮಹಾರಾಜ ಕಾಲೇಜಿನಲ್ಲಿ ಉಪನ್ಯಾಸಕರಾಗಿ ವೃತ್ತಿಯನ್ನು ಆರಂಭಿಸಿ, ನಂತರ ಬೆಂಗಳೂರಿನ ವಿಜಯಾ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ, ಪ್ರಿನ್ಸಿಪಾಲರಾಗಿ, ಸೇವೆ ಸಲ್ಲಿಸಿ ನಿವೃತ್ತಿಯಾಗಿದ್ದರು.
ಕನ್ನಡ ಸಾಹಿತ್ಯ ಪರಿಷತ್ತಿನ ಕನ್ನಡ-ಕನ್ನಡ ನಿಘಂಟುವಿನ ಪ್ರಧಾನ ಸಂಪಾದಕರಾಗಿ ಅವರ ಸೇವೆ ಅನನ್ಯ. ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ, ಕನ್ನಡ ಸಾಹಿತ್ಯ ಪರಿಷತ್ತಿಗೆ ಅಖಿಲ ಕರ್ನಾಟಕ ವ್ಯಾಪ್ತಿಯನ್ನು ತಂದುಕೊಟ್ಟ ಹಿರಿಮೆ ಅವರದ್ದು. ಆ ಮೂಲಕ ಅವರು ನಾಡಿನ ಉದ್ದಗಲಕ್ಕೂ ತಮ್ಮ ಛಾಪು ಮೂಡಿಸಿದರು.
ನಡೆದಾಡುವ ನಿಘಂಟು, ಶಬ್ದಬ್ರಹ್ಮ ಎಂದೇ ಜನಜನಿತರಾಗಿದ್ದ ಜೀವಿ ಅವರು ಸಾಹಿತ್ಯ ವಿಮರ್ಶೆ, ಸಂಶೋಧನೆ, ಅನುವಾದ, ನಿಘಂಟು ರಚನೆ ಕ್ಷೇತ್ರಗಳ ಮೂಲಕ ಕನ್ನಡ ಸೇವೆ ಮಾಡಿದ್ದರು. 50 ಪುಸ್ತಕಗಳನ್ನು, 14 ನಿಘಂಟುಗಳನ್ನು ಪ್ರಕಟಗೊಳಿಸಿದ್ದರು.
ನಿಘಂಟು ಪರಿವಾರ, ಅಕ್ರೂರ ಚರಿತ್ರೆ (ಸಂಪಾದನೆ), ಇಗೋ ಕನ್ನಡ (ಸಾಮಾಜಿಕ ನಿಘಂಟು), ಗತಿ ಪ್ರಜ್ಞೆ, ಕನ್ನಡವನ್ನು ಉಳಿಸಿ ಬೆಳೆಸಿದವರು, ಅನುಕಲ್ಪನೆ, ಕರ್ಣ ಕರ್ಣಾಮೃತ ಮುಂತಾದವು ಜೀವಿ ಅವರ ಪ್ರಮುಖ ಕೃತಿಗಳು.
ಹಲವಾರು ಶಿಕ್ಷಕ ತರಬೇತಿ ಕಾಲೇಜುಗಳಲ್ಲಿ ಆಹ್ವಾನಿತ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿರುವ ಅವರ ಪಾಂಡಿತ್ಯಕ್ಕೆ ಸಂದ ಪ್ರಶಸ್ತಿ ಪುರಸ್ಕಾರಗಳು ಹಲವಾರು. ಅವುಗಳಲ್ಲಿ ವಿದ್ಯಾಲಂಕಾರ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ, ಶಂಬಾ ಪ್ರಶಸ್ತಿ, ಸೇಡಿಯಾಪು ಪ್ರಶಸ್ತಿ, ಕಾಯಕ ಪ್ರಶಸ್ತಿ, ಪತ್ರಿಕಾ ಅಕಾಡೆಮಿ ವಿಶೇಷ ಪ್ರಶಸ್ತಿ, ಮಾಸ್ತಿ ಪ್ರಶಸ್ತಿ, ಹಂಪಿ ವಿಶ್ವವಿದ್ಯಾನಿಲಯದ ನಾಡೋಜ ಪ್ರಶಸ್ತಿ, ಅಂತರಾಷ್ಟ್ರೀಯ ನಿಘಂಟು ಸಮ್ಮೇಳನಗಳಿಗೆ ಆಹ್ವಾನ ಮುಂತಾದವು ಮುಖ್ಯವಾದವು.
ಜಿ.ವಿ. ಎಂದೇ ಖ್ಯಾತರಾದ ವೆಂಕಟಸುಬ್ಬಯ್ಯ ಅವರು ಅತ್ಯುತ್ತಮ ಭಾಷಣಕಾರರು ಹಾಗೂ ಸರಳ ಸಜ್ಜನಿಕೆಯ ವ್ಯಕ್ತಿ. ಅವರ ಅಗಲಿಕೆಯಿಂದ ಕನ್ನಡಿಗರು ದುಃಖತಪ್ತರಾಗಿದ್ದಾರೆ.
ಕನ್ನಡ ಸಾರಸ್ವತ ಲೋಕದ ಮಹೋನ್ನತ ಕೊಂಡಿ ಕಳಚಿಬಿದ್ದಿದೆ.
ಸಂತಾಪ: ಹಿರಿಯ ಭಾμÁತಜ್ಞ, ಶತಾಯುಷಿ ಪೆÇ್ರ ಜಿ.ವೆಂಕಟಸುಬ್ಬಯ್ಯನವರ ನಿಧನಕ್ಕೆ ಮುಖ್ಯಮಂತ್ರಿ ಬಿಎಸ್. ಯಡಿಯೂರಪ್ಪನÀವರು ಸಂತಾಪ ವ್ಯಕ್ತಪಡಿಸಿದ್ದಾರೆ.
ಅವರ ನಿಧನದಿಂದ ಕನ್ನಡ ಸಾರಸ್ವತ ಲೋಕದ ಅಪೂರ್ವ ರತ್ನವೊಂದು ಮರೆಯಾಗಿದೆ. ಭಗವಂತನು ಅವರ ಆತ್ಮಕ್ಕೆ ಶಾಂತಿಯನ್ನು, ಅವರ ಕುಟುಂಬ, ಅಭಿಮಾನಿಗಳಿಗೆ ದುಃಖವನ್ನು ಸಹಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸಿದ್ದಾರೆ
ಪೆÇ್ರ.ಜಿ.ವೆಂಕಟಸುಬ್ಬಯ್ಯ ಅವರ ನಿಧನಕ್ಕೆ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
108 ವರ್ಷಗಳ ಶತಾಯುಷಿ, ನಮ್ಮ ನಾಡಿನ ಹಿರಿಯ ‘ಜೀವಿʼಯಾಗಿದ್ದ ನಾಡೋಜ ಪೆÇ್ರ.ಜಿ. ವೆಂಕಟಸುಬ್ಬಯ್ಯ ಅವರ ಅಗಲಿಕೆಯಿಂದ ಕನ್ನಡ ಸಾರಸ್ವತ ಲೋಕದ ಮಹೋನ್ನತ ಕೊಂಡಿಯೊಂದು ಕಳಚಿಬಿದ್ದಂತೆ ಆಗಿದೆ ಎಂದು ಅವರು ಹೇಳಿದ್ದಾರೆ.
ನಿಘಂಟು ತಜ್ಞರಾದ ಫೆÇ್ರ.ಜಿ.ವೆಂಕಟಸುಬ್ಬಯ್ಯ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ.
ಶತಾಯುಷಿಗಳಾಗಿದ್ದ ಪೆÇ್ರ. ಜಿ .ವೆಂಕಟಸುಬ್ಬಯ್ಯ ಅವರ ನಿಧನದಿಂದ ಸಾರಸ್ವಾತ ಲೋಕ ಬಡವಾಗಿದೆ ಎಂದು ಶಿವಕುಮಾರ್ ಅವರು ಕಂಬನಿ ಮಿಡಿದಿದ್ದಾರೆ.
ಇವರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬ ಸದಸ್ಯರು, ಅಸಂಖ್ಯ ಅಭಿಮಾನಿಗಳಿಗೆ ಇವರ ಅಗಲಿಕೆ ನೋವು ಭರಿಸುವ ಶಕ್ತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಡಿ.ಕೆ. ಶಿವಕುಮಾರ್ ಅವರು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

