ಬೆಂಗಳೂರು: ಮುಷ್ಕರ ನಡೆಸಲು ಇದು ಸಮಯ ಅಲ್ಲ. ಕೂಡಲೇ ಮುಷ್ಕರ ನಿಲ್ಲಿಸಿ, ಸೇವೆ ಆರಂಭಿಸಿ ಎಂದು ಹೈಕೋರ್ಟ್ ಮಂಗಳವಾರ ಮುಷ್ಕರ ನಿರತ ಸಾರಿಗೆ ನೌಕರರಿಗೆ ಸೂಚಿಸಿದೆ.
ಸಾರಿಗೆ ಮುಷ್ಕರದ ವಿರುದ್ಧ ಸಲ್ಲಿಕೆಯಾಗಿದ್ದ ಹಲವು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ನಡೆಸಿದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎ.ಎಸ್. ಒಕಾ ಮತ್ತು ನ್ಯಾ. ಸೂರಜ್ ಗೋವಿಂದರಾಜ್ ಅವರಿದ್ದ ಪೀಠ, ಕೋವಿಡ್ ಸಂಕಷ್ಟದ ಸಮಯದಲ್ಲಿ ಮುಷ್ಕರ ನಡೆಸುವುದು ಸರಿಯಲ್ಲ. ನಿಮ್ಮ ಬೇಡಿಕೆ ಕಾಯ್ದಿರಿಸಿ ತಕ್ಷಣ ಸೇವೆ ಆರಂಭಿಸಿ ಎಂದು ತಿಳಿಸಿದೆ.
ಕೂಡಲೇ ಕರ್ತವ್ಯಕ್ಕೆ ಹಾಜರಾಗಿ, ಸಾರಿಗೆ ನೌಕರರಿಗೆ ಹೈಕೋರ್ಟ್ ಸೂಚನೆ

