ಬೆಂಗಳೂರು: ರಾಜ್ಯದಲ್ಲಿ ಗುರುವಾರ 25,795 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆ ಆಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
24 ಗಂಟೆಯಲ್ಲಿ ರಾಜ್ಯದಲ್ಲಿ 25,795 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಸೋಂಕಿತರ ಸಂಖ್ಯೆ 12,47,997ಕ್ಕೆ ಏರಿಕೆಯಾಗಿದೆ.
ಬೆಂಗಳೂರಿನಲ್ಲಿ ಏ. 22ರಂದು 15,244 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 5,98,919ಕ್ಕೆ ಏರಿಕೆಯಾಗಿದೆ. ನಗರದಲ್ಲಿ ಕೊರೊನಾ ಸೋಂಕಿನಂದ 68 ಮಂದಿ ಸಾವನ್ನಪ್ಪಿದ್ದಾರೆ
ರಾಜ್ಯದಲ್ಲಿ ಕೊರೊನಾ ಮಹಾಮಾರಿಗೆ ಗುರುವಾರ 123 ಮಂದಿ ಬಲಿಯಾಗಿದ್ದಾರೆ. ಒಟ್ಟು ಸಾವಿನ ಸಂಖ್ಯೆ 13885ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ 5624 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಗುರುವಾರ ಬಿಡುಗಡೆ ಆಗಿದ್ದಾರೆ. ಕೊರೊನಾ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 10,37,857ಕ್ಕೆ ಏರಿದೆ.
1,96,236 ಸಕ್ರೀಯ ಪ್ರಕರಣಗಳಿದ್ದು, ಈ ಪೈಕಿ 243 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆ ತಿಳಿಸಿದೆ.

