ರಾಜ್ಯದಲ್ಲಿ ವೀಕೆಂಡ್ ಕಫ್ರ್ಯೂ: ಶನಿವಾರ ಮತ್ತು ಭಾನುವಾರ ಏನಿರುತ್ತೆ, ಏನಿರಲ್ಲ?

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಣ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮೇ 4ರವರೆಗೆ ರಾಜ್ಯದಲ್ಲಿ ಬಹುತೇಕ ಎಲ್ಲಾ ಚಟುವಟಕೆಗಳ ಮೇಲೆ ನಿಬರ್ಂಧ ಹೇರಿ ಆದೇಶ ಹೊರಡಿಸಿದೆ. ಇದರೊಂದಿಗೆ ಶನಿವಾರ ಮತ್ತು ಭಾನುವಾರ ವೀಕೆಂಡ್ ಕಫ್ರ್ಯೂ ಜಾರಿ ಮಾಡಿದೆ.
ಅದರಂತೆ ನಾಳೆ (ಏ. 24)ಮತ್ತು ನಾಡಿದ್ದು (ಏ. 25) ಏನಿರುತ್ತೆ, ಏನಿರಲ್ಲ ಎಂಬ ಬಗ್ಗೆ ಕಂದಾಯ ಸಚಿವ ಆರ್.ಅಶೋಕ್ ಶುಕ್ರವಾರ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ.
ಶುಕ್ರವಾರ ರಾತ್ರಿ 9 ಗಂಟೆಯಿಂದ ಸೋಮವಾರ ಬೆಳಗ್ಗೆ 6 ಗಂಟೆಯವರೆಗೆ ವಾರಾಂತ್ಯದ ಕಫ್ರ್ಯೂ ಜಾರಿಯಲ್ಲಿರುತ್ತದೆ ಎಂದರು.
ಯಾರು ಓಡಾಡಬಹುದು, ಯಾರು ಓಡಾಡಬಾರದು ಅಂತ ಕಂದಾಯ ಇಲಾಖೆ ವಿಪತ್ತು ನಿರ್ವಹಣಾ ಸಮಿತಿಯಿಂದ ಆದೇಶ ಹೊರಡಿಸಲಾಗಿದೆ ಎಮದ ಅವರು, ತುರ್ತು ಸೇವೆ ಒದಗಿಸುವ ಎಲ್ಲ ಸರ್ಕಾರಿ ಇಲಾಖೆ, ಕಾಪೆರ್Çೀರೇಷನ್ ಗಳವರು ಓಡಾಡಬಹುದು. ತುರ್ತುಸೇವೆ ಒದಗಿಸುವ ಕಾರ್ಖಾನೆ, ಸಂಸ್ಥೆ ಸಿಬ್ಬಂದಿ, ಟೆಲಿಕಾಂ ಕಂಪನಿ ಉದ್ಯೋಗಿಗಳು ಐಡಿ ಕಾರ್ಡ್ ತೋರಿಸಿ ಓಡಾಡಬಹುದು ಎಂದು ಅವರು ಹೇಳಿದರು.
ದಿನಸಿ ಅಂಗಡಿ, ಹಣ್ಣು ತರಕಾರಿ ಹಾಲು ಮಾಂಸದ ಅಂಗಡಿ ಬೆಳಗ್ಗೆ 6-10 ಗಂಟೆಯವರೆಗೆ ತೆಗೆದಿರಬಹುದು. ರೆಸ್ಟೋರೆಂಟ್ ಗಳಲ್ಲಿ ಪಾರ್ಸೆಲ್‍ಗೆ ಮಾತ್ರ ಅವಕಾಶ ನೀಡಲಾಗಿದೆ ಎಂದರು.
ಸಿನಿಮಾ, ಬಾರ್, ಪಬ್, ಮಾಲ್ ಎಲ್ಲದರ ಮೇಲೆ ನಿμÉೀಧ ಹೇರಲಾಗಿದೆ. ಧಾರ್ಮಿಕ ರಾಜಕೀಯ ಗುಂಪು ಸೇರುವಿಕೆ ನಿμÉೀಧ ಇದೆ. ಪಾರ್ಕ್ ಓಪನ್ ಇರುತ್ತೆ. ಧಾರ್ಮಿಕ ಕೇಂದ್ರಗಳನ್ನು ನಿμÉೀಧಿಸಲಾಗಿದೆ. ಆದರೆ ಅರ್ಚಕರು ಮಾತ್ರ ಹೋಗಬಹುದು ಎಂದವರು ತಿಳಿಸಿದರು.
ಮದುವೆ ಕಾರ್ಯಕ್ರಮಕ್ಕೆ 50 ಜನರು ಮಾತ್ರ ಹೋಗಬೇಕು.
ಈ ವೀಕೆಂಡ್ ಕಫ್ರ್ಯೂ ಸಂದರ್ಭದಲ್ಲಿ ಎರಡು ದಿನ ಮಾತ್ರ ಕಟ್ಟಡದ ಸಿವಿಲ್ ಕೆಲಸ ಇರುವುದಿಲ್ಲ. ಉಳಿದ ದಿನ ಇರತ್ತೆ. ರೋಗಿಗಳು ಖಾಸಗಿ ವಾಹನದಲ್ಲಿ ಓಡಾಡಬಹುದು. ಮಾಧ್ಯಮದವರು, ವೈದ್ಯರು, ನಸಿರ್ಂಗ್ ಸ್ಟಾಫ್ ಎಲ್ಲರೂ ಕೂಡ ಓಡಾಡಬಹುದು ಎಂದವರು ಹೇಳಿದರು.
ಅಂತರ್ ಜಿಲ್ಲಾ ಓಡಾಟಕ್ಕೆ ಬಸ್ಸು, ರೈಲು, ವಿಮಾನ ಮಾತ್ರ ಬಳಸಬೇಕು. ಅಂತರ್ ಜಿಲ್ಲಾ ಓಡಾಟಕ್ಕೆ ಖಾಸಗಿ ವಾಹನಗಳಲ್ಲಿ ಓಡಾಡಬೇಡಿ. ರೋಗಿಗಳು ಅವರ ಕುಟುಂಬಸ್ಥರು ಓಡಾಡುವುದಕ್ಕೆ ನಿಬರ್ಂಧ ಇಲ್ಲ ಎಂದು ಹೇಳಿದರು.
ದೂರ ಪ್ರಯಾಣಕ್ಕಾಗಿ ಹೋಗುವವರು, ಬಸ್ ನಿಲ್ದಾಣ. ರೈಲ್ವೆ ವಿಮಾನ ನಿಲ್ದಾಣಕ್ಕೆ ಹೋಗುವವರು ಸಾರ್ವಜನಿಕ ಸಾರಿಗೆ ಬಳಸಬಹುದು. ಆದರೆ ಟಿಕೆಟ್ ತೋರಿಸಬೇಕು ಎಂದು ಅವರು ತಿಳಿಸಿದರು.
ಕೋವಿಡ್‍ನಿಂದ ಮೃತಪಟ್ಟವರನ್ನು ಸ್ವಂತ ಜಮೀನಿನಲ್ಲಿ ಶವ ಸಂಸ್ಕಾರ ಮಾಡಲು ಅವಕಾಶ ಕಲ್ಪಿಸಲಾಗಿದೆ. ಆದರೆ ಸಂಬಂಧಪಟ್ಟವರಿಂದ ಅನುಮತಿ ಪಡೆದು ಕೋವಿಡ್ ನಿಯಮ ಪಾಲನೆ ಮಾಡಬೇಕು ಎಂದರು.
ನಾಳೆಯಿಂದ ಪ್ರತಿ ಮೂರು ಗಂಟೆಗೆ 50 ಶವಸಂಸ್ಕಾರಕ್ಕೆ ಅವಕಾಶ ನೀಡಲಾಗಿದೆ. ಅಂಬ್ಯುಲೆನ್ಸ್ ಗಳು ರಸ್ತೆಯಲ್ಲಿ ಕ್ಯೂ ನಿಲ್ಲಬಾರದು. ಬಂದ ತಕ್ಷಣ ಯಾವುದೇ ವಿಳಂಬವಿಲ್ಲದೆ ಶವಸಂಸ್ಕಾರಕ್ಕೆ ಅವಕಾಶ ನೀಡಲಾಗಿದೆ ಎಂದು ಸಚಿವ ಅಶೋಕ್ ತಿಳಿಸಿದರು.
ವೀಕೆಂಡ್ ಕಫ್ರ್ಯೂ ಹಿನ್ನಲೆ, ನಮ್ಮ ಮೆಟ್ರೋ ಸೇವೆ ಇಂದು ಸಂಜೆ ಸ್ಥಗಿತಗೊಳ್ಳಲಿದೆ. ಅದಾದ ಬಳಿಕ ಸೋಮವಾರ 7 ಗಂಟೆಗೆ ಮೆಟ್ರೋ ಸೇವೆ ಆರಂಭವಾಗಲಿದೆ. ಶನಿವಾರ ಹಾಗೂ ಭಾನುವಾರ ಮೆಟ್ರೋ ಸಂಚಾರ ಇರುವುದಿಲ್ಲ ಎಂದು ಬಿಎಂಆರ್ ಸಿಎಲ್ ಪ್ರಕಟಣೆಯಲ್ಲಿ ತಿಳಿಸಿದೆ.