ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅವರು ಕೊರೊನಾದಿಂದ ಗುಣ ಹೊಂದಿದ್ದಾರೆ.
ಕೊರೊನಾ ಸೋಂಕಿಗೆ ಒಳಗಾಗಿದ್ದ ಕುಮಾರಸ್ವಾಮಿ ಅವರು ಶನಿವಾರ ಸೋಂಕಿನಿಂದ ಗುಣಮುಕ್ತರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.
ಈ ಕುರಿತು ಹೆಚ್.ಡಿ.ಕೆ ಹೆಚ್.ಡಿ. ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
ಎರಡು ವಾರಗಳ ಕಾಲ ವೈದ್ಯರ ಸಲಹೆ ಮೇರೆಗೆ ಸಾರ್ವಜನಿಕರನ್ನು ಭೇಟಿ ಮಾಡಲು ಸಾಧ್ಯವಿಲ್ಲ. ದಯಮಾಡಿ ಸಹಕರಿಸಿ ಎಂದು ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳಲ್ಲಿ ಹೆಚ್ ಡಿಕೆ ಮನವಿ ಮಾಡಿದ್ದಾರೆ.
ಕುಮಾರಸ್ವಾಮಿ ಅವರು ಕೊರೊನಾ ಸೋಂಕಿನಿಂದ ಗುಣಮುಕ್ತವಾಗಿರುವುದು ಇದು ಎರಡನೆ ಸಲ.
ಕೊರೊನಾ ಸೋಂಕಿನಿಂದ ಹೆಚ್.ಡಿ.ಕುಮಾರಸ್ವಾಮಿ ಗುಣಮುಕ್ತ

