ಬೆಂಗಳೂರು: ರೆಮ್ಡಿಸಿವಿರ್ ನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ 16 ಮಂದಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಅಕ್ರಮವಾಗಿ ರೆಮ್ಡಿಸಿವಿರ್ ಚುಚ್ಚುಮದ್ದು ಸಂಗ್ರಹಿಸಿಟ್ಟುಕೊಂಡಿದ್ದ ಆರೋಪಿಗಳು, 10 ಸಾವಿರ ರೂನಿಂದ 11 ಸಾವಿರ ರೂಗೆ ಮಾರಾಟ ಮಾಡುತ್ತಿದ್ದರು ಎಂದು ಸಿಸಿಬಿ ಜಂಟಿ ಆಯುಕ್ತ ಸಂದೀಪ್ ಪಾಟೀಲ್ ಅವರು ತಿಳಿಸಿದ್ದಾರೆ.
ಸಿಸಿಬಿ ಪೆÇಲೀಸರು ಬೆಂಗಳೂರಿನ ಹಲವೆಡೆ ದಾಳಿ ನಡೆಸಿ 16 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತರಿಂದ 55 ಚುಚ್ಚುಮದ್ದು ಬಾಟಲಿಗಳನ್ನು ಜಪ್ತಿ ಮಾಡಿದ್ದಾರೆ.
ಬಂಧಿತರ ಪೈಕಿ ಇಬ್ಬರು ವೈದ್ಯಕೀಯ ಔಷಧಿಗಳ ವಿತರಕರು.
ರೆಮ್ಡಿಸಿವಿರ್ ಅಕ್ರಮ ಮಾರಾಟ: 16 ಮಂದಿ ಬಂಧನ

