ಕರ್ನಾಟಕದಲ್ಲಿ 14 ದಿನಗಳ ಕಾಲ ಲಾಕ್‍ಡೌನ್

ಬೆಂಗಳೂರು: ರಾಜ್ಯದಲ್ಲಿ ಕೊರೊನಾ 2ನೇ ಅಲೆ ನಿಯಂತ್ರಿಸಲು ರಾಜ್ಯಾದ್ಯಂತ 14 ದಿನಗಳ ಕಾಲ ಲಾಕ್‍ಡೌನ್ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಏ. 27ರಿಂದ 14 ದಿನಗಳಕಾಲ ಬಿಗಿ ಕ್ರಮವನ್ನು ಕೈಗೊಳ್ಳಲಾಗಿದೆ ಎಂದು ಸಿಎಂ ಬಿ. ಎಸ್. ಯಡಿಯೂರಪ್ಪನವರು ಸೋಮವಾರ ತಿಳಿಸಿದರು.
ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿದ ಸಿಎಂ ಬಿ.ಎಸ್.ಯಡಿಯೂರಪ್ಪ 14 ದಿನಗಳ ಕಾಲ ರಾಜ್ಯದಲ್ಲಿ ಕಠಿಣ ಕ್ರಮಗಳನ್ನು ಜಾರಿಗೊಳಿಸಲಾಗಿದೆ ಎಂದು ಹೇಳಿದರು.
ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ತಿಳಿಸಿದರು.
ಮಹಾರಾಷ್ಟ್ರಗಿಂತ ರಾಜ್ಯದಲ್ಲಿ ಸೋಂಕು ಪ್ರಮಾಣ ಹೆಚ್ಚಾಗಿರುವುದರಿಂದ 2 ವಾರಗಳ ಕಾಲ ಕಟ್ಟುನಿಟ್ಟಿನ ನಿಯಮಗಳನ್ನು ಪಾಲಿಸಬೇಕು ಎಂದು ಸಿಎಂ ಜನರಲ್ಲಿ ಮನವಿ ಮಾಡಿದರು. 2 ವಾರದಲ್ಲಿ ಕೊರೊನಾ ನಿಯಂತ್ರಣಕ್ಕೆ ಬರದಿದ್ದರೆ ಮತ್ತೆ ಲಾಕ್‍ಡೌನ್ ಮುಂದುವರೆಸುವ ಬಗ್ಗೆ ಚಿಂತನೆ ನಡೆಸಬೇಕಾಗುತ್ತದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಈ ಅವಧಿಯಲ್ಲಿ ಬೆಳಗ್ಗೆ 6ರಿಂದ 10 ಗಂಟೆ ವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಸಿಎಂ ಹೇಳಿದರು.
ರಾತ್ರಿ 9ರಂದ ಬೆಳಗ್ಗೆ 6 ಗಂಟೆ ವರೆಗೆ ಕಪ್ರ್ಯೂವನ್ನು ವಿಧಿಸಲಾಗಿದೆ ಎಂದರು ಮುಖ್ಯಮಂತ್ರಿಗಳು.
ಯಾವುದೆ ಸಾರಿಗೆ ವ್ಯಸ್ಥೆ ಇರುವುದಿಲ್ಲವೆಂದು ಸಿಎಂ ಹೇಳಿದರು. ಅಂತರ ರಾಜ್ಯ, ಅಂತರ ಜಿಲ್ಲಾ ವಾಹನಗಳ ಸಂಚಾರ ಇರುವುದಿಲ್ಲವೆಂಉ ಅವರು ತಿಳಿಸಿದರು.
18 ವರ್ಷ ಮೇಲ್ಪಟ್ಟವರಿಗೆ ಉಚಿತ ಲಸಿಕೆ ನೀಡಲು ನಿರ್ಧರಿಸಲಾಗಿದೆ. 45 ವರ್ಷ ಮೇಲ್ಪಟ್ಟವರಿಗೆ ಈಗಾಗಲೇ ಕೇಂದ್ರ ಸರ್ಕಾರ ಉಚಿತ ಲಸಿಕೆ ನೀಡುತ್ತಿದೆ ಎಂದು ಅವರು ಹೇಳಿದ್ದಾರೆ.
ರಾತ್ರಿ 9 ರಿಂದ ಬೆಳಗ್ಗೆ 6 ಗಂಟೆಯರೆಗೂ ಕಫ್ರ್ಯೂ ಮುಂದುವರೆಯಲಿದೆ. ತಾಲೂಕ್ ಅಧಿಕಾರಿಗಳು ಬಿಗಿ ಕ್ರಮ ಕೈಗೊಳ್ಳಲಾಗಬೇಕು. ರಾಜ್ಯದಲ್ಲಿ ಆಕ್ಸಿಜನ್ 800 ಮೆಟ್ರಿಕ್ ಟನ್ ನೀಡಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ.
ಈ ಸಂದರ್ಭದಲ್ಲಿ ಸಾರಿಗೆ ಸಂಚಾರ ಇರುವುದಿಲ್ಲ. ಸರಕು- ಸಾಗಾಣಿಕೆ ವಾಹನಗಳಿಗೆ ಮಾತ್ರ ಈ ಅವಧಿಯಲ್ಲಿ ವಿನಾಯಿತಿ ನೀಡಲಾಗಿದೆ ಎಂದು ಯಡಿಯೂರಪ್ಪ ತಿಳಿಸಿದರು.