ಎಂಜಿನಿಯರಿಂಗ್, ಪಾಲಿಟೆಕ್ನಿಕ್ ಪರೀಕ್ಷೆಗಳು ಮುಂದೂಡಿಕೆ

ಬೆಂಗಳೂರು: ರಾಜ್ಯಾದ್ಯಂತ ಏಪ್ರಿಲ್ 27ರ ರಾತ್ರಿಯಿಂದ 14 ದಿನ ಕೊರೋನಾ ಕಫ್ರ್ಯೂ ಜಾರಿ ಹಿನ್ನಲೆಯಲ್ಲಿ ನಾಳೆ (ಏ. 27)ಯಿಂದ ನಡೆಯಬೇಕಿದ್ದ ಎಂಜಿನಿಯರಿಂಗ್ ಮತ್ತು ಡಿಪೆÇ್ಲಮಾ ಪರೀಕ್ಷೆಗಳನ್ನು ಮುಂದಕ್ಕೆ ಹಾಕಲಾಗಿದೆ.
ಈ ಬಗ್ಗೆ ಹೇಳಿಕೆ ನೀಡಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು, ಎಂಜಿನಿಯರಿಂಗ್, ಪಾಲಿಟೆಕ್ನಿಕ್‍ನ ಎಲ್ಲ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಎರಡನೇ ಅಲೆಯ ನಡುವೆ ನಾಡಿನ ಕ್ಷೇಮಕ್ಕಾಗಿ ಕೊರೊನಾ ಕಫ್ರ್ಯೂ ವಿಧಿಸಲಾಗಿದೆ ಎಂದು ತಿಳಿಸಿದರು.
ಪರೀಕ್ಷೆಗಳು ಯಾವಾಗ ನಡೆಯುತ್ತವೆ ಎಂಬುದನ್ನು ಕೊರೊನಾ ಕಫ್ರ್ಯೂ ಮುಗಿದ ನಂತರ ತಿಳಿಸಲಾಗುವುದು ಎಂದು ಡಿಸಿಎಂ ಹೇಳಿದ್ದಾರೆ.