ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಚಿಕ್ಕಮ್ಮ ನರ್ಮದಾ ಬೇನ್ (80) ಕೋವಿಡ್ ನಿಂದ ಮಂಗಳವಾರ ಸಾವನ್ನಪ್ಪಿದ್ದಾರೆ.
ಕೋವಿಡ್ ಸೋಂಕಿನಿಂದ ಬಳಲುತ್ತಿದ್ದ ನರ್ಮದಾ ಬೇನ್ ಅವರು ಗುಜರಾತ್‍ನ ಅಹಮದಾಬಾದ್‍ನಲ್ಲಿನ ಸಿವಿಲ್ ಆಸ್ಪತ್ರೆಯಲ್ಲಿ ಅಸುನೀಗಿದ್ದಾರೆ.
ಕಳೆದ 10 ದಿನಗಳ ಹಿಂದೆ ನಮ್ಮ ಚಿಕ್ಕಮ್ಮನಿಗೆ ಸೋಂಕು ಕಾಣಿಸಿಕೊಂಡಿತು. ಅವರನ್ನು ಇಲ್ಲಿನ ಸಿವಿಲ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಿಸದೇ ಅವರು ಕೊನೆಯುಸಿರೆಳೆದಿದ್ದಾರೆ ಎಂದು ನರೇಂದ್ರ ಮೋದಿ ಸಹೋದರ ಪ್ರಹ್ಲಾದ್ ಮೋದಿ ಮಾಹಿತಿ ನೀಡಿದ್ದಾರೆ.
ಕೋವಿಡ್ ಗೆ ಪ್ರಧಾನಿ ಮೋದಿ ಚಿಕ್ಕಮ್ಮ ಬಲಿ

