ನವದೆಹಲಿ: ಚುನಾವಣಾ ಮತ ಎಣಿಕೆ ಕೇಂದ್ರಕ್ಕೆ ಪ್ರವೇಶಿಸುವವರು ಎರಡು ಡೋಸ್ ಕೊರೊನಾ ಲಸಿಕೆಯನ್ನು ಪಡೆಯಬೇಕು ಎಂದು ಚುನಾವಣಾ ಆಯೋಗ ಬುಧವಾರ ಆದೇಶಿಸಿದೆ.
ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಹಾಗೂ ಸೇರಿದಂತೆ ಐದು ರಾಜ್ಯಗಳಲ್ಲಿ ಇತ್ತೀಚೆಗೆ ಚುನಾವಣೆ ನಡೆದಿತ್ತು.
ಮೇ 2ರ ಭಾನುವಾರ ಈ ಚುನಾವಣಾ ಫಲಿತಾಂಶ ಹೊರಬೀಳಲಿದೆ. ಆದರೆ, ಅಭ್ಯರ್ಥಿಗಳು ಚುನಾವಣಾ ಮತ ಎಣಿಕೆ ಕೇಂದ್ರಕ್ಕೆ ಪ್ರವೇಶಿಸಬೇಕಿದ್ದರೆ ಎರಡು ಡೋಸ್ ಕೊರೋನಾ ಲಸಿಕೆಯನ್ನು ಕಡ್ಡಾಯವಾಗಿ ಪಡೆಯಲೇಬೇಕು ಎಂದು ಚುನಾವಣಾ ಆಯೋಗ ಸೂಚಿಸಿದೆ.
48 ಗಂಟೆಗಳ ಕೋವಿಡ್ ಋಣಾತ್ಮಕ ಆರ್‍ಟಿ-ಪಿಸಿಆರ್ ಪರೀಕ್ಷೆಯ ನಂತರವೇ ಅಭ್ಯರ್ಥಿಗಳು ಮತ್ತು ಅವರ ಏಜೆಂಟರನ್ನು ಮತ ಎಣಿಕೆ ಕೇಂದ್ರದ ಒಳಗೆ ಹೋಗಲು ಚುನಾವನಾ ಆಯೋಗ ತಿಳಿಸಿದೆ.
ನೆಗೆಟಿವ್ ಆರ್‍ಟಿ-ಪಿಸಿಆರ್ ವರದಿ, ರಾಪಿಡ್ ಆಂಟಿಜೆನ್ ಟೆಸ್ಟ್ ವರದಿ ಅಥವಾ ವ್ಯಾಕ್ಸಿನೇಷನ್ ಪ್ರಮಾಣಪತ್ರಗಳನ್ನು ಎಣಿಕೆಯ ಪ್ರಾರಂಭಕ್ಕೆ 48 ಗಂಟೆಗಳ ಮೊದಲು ಸ್ವೀಕರಿಸಬೇಕು ಎಂದು ಚುನಾವನಾ ಆಯೋಗ ಸೂಚಿಸಿದೆ.
ಚುನಾವಣೆಯಲ್ಲಿ ಗೆಲುವು ಸಾಧಿಸಿದ ಅಭ್ಯರ್ಥಿ ಯಾವುದೇ ಕಾರಣಕ್ಕೂ ವಿಜಯೋತ್ಸವವನ್ನು ಆಚರಿಸಬಾರದು ಎಂದು ಈಗಾಗಲೇ ಆದೇಶಿಸಿದೆ.
2 ಡೋಸ್ ಲಸಿಕೆ ಪಡೆದವರಿಗೆ ಮಾತ್ರ ಮತ ಎಣಿಕೆ ಕೇಂದ್ರಕ್ಕೆ ಪ್ರವೇಶ

