ಬಸವಕಲ್ಯಾಣ: ಬೀದರ್ ಜಿಲ್ಲೆಯ ಬಸವ ಕಲ್ಯಾಣ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಶರಣು ಸಲಗರ 20 ಸಾವಿರದ 904 ಮತಗಳ ಅಂತರದಿಂದ ಜಯ ಗಳಿಸಿದ್ದಾರೆ.
ಶರಣು ಸಲಗರ ಅವರು ತಮ್ಮ ಪ್ರತಿಸ್ಪರ್ಧಿ ಕಾಂಗ್ರೆಸ್ ನ ಮಾಲಾ ಬಿ ನಾರಾಯಣರಾವ್ ಅವರನ್ನು ಸೋಲಿಸಿದ್ದಾರೆ.
ಈ ಮೂಲಕ ವಿಧಾನಸಭೆಗೆ ಶರಣು ಸಲಗರ ಮೊದಲ ಬಾರಿಗೆ ಪ್ರವೇಶಿಸುತ್ತಿದ್ದಾರೆ.
ತಮ್ಮ ಗೆಲುವನ್ನು ಕ್ಷೇತ್ರದ ಮತದಾರರು ಮತ್ತು ಪಕ್ಷಕ್ಕೆ ಅರ್ಪಿಸಿದ ಶರಣು ಸಲಗರ, ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುತ್ತೇನೆ ಎಂದು ಹೇಳಿದರು.
ಬಸವಕಲ್ಯಾಣ ಕ್ಷೇತ್ರದಲ್ಲಿ ಗೆದ್ದ ಪಕ್ಷದ ಅಭ್ಯರ್ಥಿ ಶರಣು ಸಲಗರ ಅವರಿಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅಭಿನಂದನೆ ಸಲ್ಲಿಸಿದ್ದಾರೆ.
ಶರಣು ಸಲಗರ ಗೆಲುವು

