ಗುವಾಹಟಿ: ಅಸ್ಸೋಂನಲ್ಲಿ ಮತ್ತೆ ಎನ್‍ಡಿಎ ಮೈತ್ರಿಕೂಟ ಅಧಿಕಾರದ ಚುಕ್ಕಾಣಿ ಹಿಡಿಯುವಲ್ಲಿ ಯಶಸ್ವಿಯಾಗಿದೆ.
ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟ 76ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಜಯ ಸಾಧಿಸಿದೆ.
ಬಿಜೆಪಿ 55 ಹಾಗೂ ಮೈತ್ರಿಪಕ್ಷವಾದ ಅಸ್ಸೋಂ ಗಣ ಪರಿಷತ್ ನ 15 ಅಭ್ಯರ್ಥಿಗಳು ವಿಜಯ ಸಾಧಿಸಿದ್ದಾರೆ.
124 ವಿಧಾನಸಭೆ ಕ್ಷೇತ್ರಗಳಲ್ಲಿ 64 ಕ್ಷೇತ್ರದಲ್ಲಿ ಬಹುಮತ ಪಡೆಯುವ ಪಕ್ಷ ಸರ್ಕಾರ ರಚಿಸುವ ಹಕ್ಕು ಮಂಡಿಸಲಿದೆ.
ಮತ್ತೊಮ್ಮೆ ಸರ್ಕಾರ ರಚಿಸಲು ಮತದಾರ ನಮಗೆ ಆಶೀರ್ವಾದ ನೀಡಿದ್ದು, ಮಿತ್ರಪಕ್ಷಗಳ ನೆರವಿನೊಂದಿಗೆ ಮತ್ತೆ ಸರ್ಕಾರ ರಚಿಸುತ್ತೇವೆ ಎಂದು ಮುಖ್ಯಮಂತ್ರಿ ಸರ್ಬಾನಂದ ಸೋನೋವಾಲ ತಿಳಿಸಿದ್ದಾರೆ.
ಅಸ್ಸೋಂನಲ್ಲಿ ಮತ್ತೆ ಅಧಿಕಾರಕ್ಕೆ ಎನ್ ಡಿಎ

