ಚೆನ್ನೈ: ತಮಿಳುನಾಡಿನಲ್ಲಿ ಸೂರ್ಯೋದಯವಾಗಿದೆ.
ತಮಿಳುನಾಡಿನಲ್ಲಿ ಡಿಎಂಕೆ ಜಯಭೇರಿ ಬಾರಿಸಿದೆ.
ಆರಂಭದಿಂದಲೂ ಮುನ್ನಡೆ ಕಾಯ್ದುಕೊಳ್ಳುತ್ತಲೇ ಬಂದ ಡಿಎಂಕೆಗೆ 10 ವರ್ಷಗಳ ನಂತರ ಅಧಿಕಾರ ದಕ್ಕಿದೆ.
ತಮಿಳುನಾಡಿನ ಒಟ್ಟು 234 ಕ್ಷೇತ್ರಗಳಲ್ಲಿ ಡಿಎಂಕೆ-143 ಕ್ಷೇತ್ರಗಳಲ್ಲಿ ಜಯ ಸಾಧಿಸಿ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಎಐಎಡಿಎಂಕೆ-90 ಕ್ಷೇತ್ರಗಳಲ್ಲಿ ಗೆದ್ದಿದ್ದರೆ, ಮಕ್ಕಳ್ ನಿಧಿ ಮಯ್ಯಂ ಕೇವಲ ಒಂದು ಕ್ಷೇತ್ರದಲ್ಲಿ ಮಾತ್ರ ಜಯಶಾಲಿ ಆಗಿದೆ.
ಪಕ್ಷದ ಮುಖ್ಯಸ್ಥ ಎಂಕೆ ಸ್ಟಾಲಿನ್ ಮೇ 6ರಂದು ತಮಿಳುನಾಡಿನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ತಮಿಳುನಾಡಿನಲ್ಲಿ ಸೂರ್ಯೋದಯ

