ದ್ವಿತೀಯ ಪಿಯುಸಿ ಪರೀಕ್ಷೆ ಮುಂದೂಡಿಕೆ: ಪ್ರಥಮ ಪಿಯು ವಿದ್ಯಾರ್ಥಿಗಳು ಪಾಸ್

ಬೆಂಗಳೂರು: ಕೊರೊನಾ ಸೋಂಕಿನ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಮುಂದೂಡಲಾಗಿದೆ.
ಕೋವಿಡ್ ಸೋಂಕಿನ ಪ್ರಸರಣದ ಹಿನ್ನೆಲೆಯಲ್ಲಿ ಮೇ 24ರಿಂದ ಆರಂಭವಾಗಬೇಕಿದ್ದ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಪ್ರಾಥಮಿಕ ಮತ್ತು ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮುಂದಿನ ದಿನದಲ್ಲಿ ಪರೀಕ್ಷೆಗಳ ದಿನಾಂಕವನ್ನು ಪ್ರಕಟಿಸಲಾಗುವುದು ಎಮದವರು ತಿಳಿಸಿದ್ದಾರೆ.
ಪರೀಕ್ಷಾ ದಿನಾಂಕಗಳನ್ನು ಪರೀಕ್ಷೆಗಳು ಆರಂಭವಾಗುವುದಕ್ಕೆ 15-20 ದಿನಗಳ ಮುನ್ನವೇ ಪ್ರಕಟಿಸಲಾಗುವುದು ಎಂದಿದ್ದಾರೆ.
ಪ್ರಥಮ ವರ್ಷದ ಪಿಯು ವಿದ್ಯಾರ್ಥಿಗಳನ್ನು ಮುಂದಿನ ತರಗತಿಗೆ ತೇರ್ಗಡೆ ಮಾಡುವ ನಿರ್ಧಾರವನ್ನೂ ತೆಗೆದುಕೊಳ್ಳಲಾಗಿದೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.
ಪರೀಕ್ಷೆಗಳನ್ನು ಮುಂದೂಡಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳೊಂದಿಗೆ ಸತತವಾಗಿ ಸಂಪರ್ಕದಲ್ಲಿರುವಂತೆ ಉಪನ್ಯಾಸಕರು ವರ್ಕ್ ಫ್ರಂ ಹೋಂ ಕೆಲಸ ಮಾಡಲು ಸೂಚಿಸಲಾಗಿದೆ.