ಚಾಮರಾಜನಗರ ಆಕ್ಸಿಜನ್ ದುರಂತ ಕುರಿತು ನ್ಯಾಯಾಂಗ ತನಿಖೆಗೆ ಸರ್ಕಾರ ಆದೇಶ

ಬೆಂಗಳೂರು : ರಾಜ್ಯ ಸರಕಾರ ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಆದೇಶಿಸಿದೆ.
ಹೈಕೋರ್ಟ್ ನಿ.ನ್ಯಾಮೂರ್ತಿ ಬಿ. ಎ ಪಾಟೀಲ್ ನೇಮಕ ಅವರ ನೇತೃತ್ವದಲ್ಲಿ ಏಕಸದಸ್ಯ ಆಯೋಗವನ್ನು ಸರಕಾರ ರಚಿಸಿ ಅದೇಶ ಮಾಡಿದೆ.
ಚಾಮರಾಜನಗರ ಆಕ್ಸಿಜನ್ ದುರಂತ ಘಟನೆ ತನಿಖೆಗೆ ಒಂದು ತಿಂಗಳ ಕಾಲಾವಕಾಶ ನೀಡಲಾಗಿದೆ.
ಮೈಸೂರಿನಲ್ಲೇ ಕಚೇರಿ ತೆರೆದು ತನಿಖೆ ಮಾಡುವಂತೆ ಆದೇಶದಲ್ಲಿ ಸೂಚಿಸಲಾಗಿದೆ.
ಚಾಮರಾಜನಗರದ ಕೋವಿಡ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಸಿಗದೆ 22 ಮಂದಿ ಸಾವನ್ನಪ್ಪಿದ್ದರು.
ಈ ದುರ್ಘಟನೆ ಕುರಿತು ಸರಕಾರ ನ್ಯಾಯಾಂಗ ತನಿಖೆಗೆ ಆದೇಶ ಮಾಡಿದೆ.