ಚೆನ್ನೈ: ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಡಿಎಂಕೆ ಪಕ್ಷದ ಅಧ್ಯಕ್ಷ ಎಂ.ಕೆ. ಸ್ಟಾಲಿನ್ ಶುಕ್ರವಾರ ಪ್ರಮಾಣವಚನ ಸ್ವೀಕಾರ ಮಾಡಿದರು.
ಕೊರೋನಾ ಹಿನ್ನೆಲೆಯಲ್ಲಿ ಚೆನ್ನೈನ ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಎಂ.ಕೆ. ಸ್ಟಾಲಿನ್ ಪ್ರಮಾಣವಚನ ಸ್ವೀಕಾರ ಮಾಡಿದರು.
ರಾಜ್ಯಪಾಲ ಬನ್ವರಿಲಾಲ್ ಪುರೋಹಿತ್ ಪ್ರಮಾಣವಚನ ಬೋಧಿಸಿದ್ದಾರೆ.
ಸಿಎಂ ಎಂ.ಕೆ. ಸ್ಟಾಲಿನ್ ಅವರೊಂದಿಗೆ ಒಟ್ಟು 34 ಸಚಿವರು ಪ್ರಮಾಣವಚನ ಸ್ವೀಕರಿಸಿದ್ದಾರೆ.
ಇದೇ ಮೊದಲ ಬಾರಿಗೆ ಎಂ.ಕೆ. ಸ್ಟಾಲಿನ್ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ.
ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಡಿಎಂಕೆ ಪಕ್ಷ 234 ಕ್ಷೇತ್ರಗಳ ಪೈಕಿ 133 ಸ್ಥಾನಗಳಲ್ಲಿ ಜಯ ಗಳಿಸಿತ್ತು.
ಕಾಂಗ್ರೆಸ್ ಜೊತೆಗೆ ಮೈತ್ರಿ ಮಾಡಿಕೊಂಡಿದ್ದ ಡಿಎಂಕೆ ಮೈತ್ರಿಕೂಟ 159 ಸ್ಥಾನಗಳನ್ನು ಪಡೆದು, ಸರ್ಕಾರ ರಚಿಸಿದೆ.
ಬಿಜೆಪಿ, ಪಿಎಂಕೆ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಂಡಿದ್ದ ಎಐಡಿಎಂಕೆ ಕೇವಲ 66 ಸ್ಥಾನಗಳನ್ನು ಪಡೆದಿದೆ.
ತಮಿಳುನಾಡಿನ ಸಿಎಂ ಆಗಿ ಎಂ.ಕೆ. ಸ್ಟಾಲಿನ್ ಪ್ರಮಾಣವಚನ ಸ್ವೀಕಾರ

